ಬೆಂಗಳೂರು |ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು, ಜ.08: “ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ : ನವದೆಹಲಿ | ಕೃಷಿ ಹಾಗೂ ವಿವಿಧ ಯೋಜನೆಗಳ ಅನುಮೋದನೆಗೆ ಕೇಂದ್ರ ಸಚಿವರಿಗೆ ಮನವಿ – ಚಲುವರಾಯಸ್ವಾಮಿ

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ” ಎಂದು ತಿರುಗೇಟು ನೀಡಿದರು.

ಇತ್ತೀಚೆಗೆ ನಾನು ದೆಹಲಿಗೆ ಹೋಗಿ ಬಡ್ತಿ ಹಾಗೂ ವರದಾ ನದಿ ಜೋಡಣೆ ವಿಚಾರದಲ್ಲಿ ಒಪ್ಪಂದಕ್ಕೆ ಸಹಿ ಹಾಕಿ ಬಂದಿದ್ದೇನೆ. ಬೊಮ್ಮಾಯಿ ಅವರ ಮುಂದಾಳತ್ವದಲ್ಲಿ ಪ್ರಧಾನಮಂತ್ರಿಗಳ ಭೇಟಿಗೆ ಸಮಯ ನಿಗದಿ ಮಾಡಿ. ನಾವೂ ಬರುತ್ತೇವೆ ಎಲ್ಲಾ ಪಕ್ಷಗಳೂ ರಾಜಕಾರಣವನ್ನು ಪಕ್ಕಕ್ಕಿಟ್ಟು, ನಮ್ಮ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲು ಒಗ್ಗಟ್ಟಾಗಿ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆ ಮನವಿ ಮಾಡೋಣ. ಅಗತ್ಯವಿದ್ದರೆ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಹಿಂಪಡೆಯೋಣ. ಇನ್ನು ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣ ತೀರ್ಪಿನ ಅನ್ವಯ ನೀರಿನ ಬಳಕೆಗೆ ಕೇಂದ್ರ ಸರ್ಕಾರದ ಅರಣ್ಯ ಇಲಾಖೆಯಿಂದ ಒಪ್ಪಿಗೆ ಸಿಕ್ಕರೆ ನೀವು ಮಾಡಿಕೊಂಡು ಬಂದಿರುವ ಹೋರಾಟಕ್ಕೆ ಮುಕ್ತಿ ಸಿಗುತ್ತದೆ. ಈ ಯೋಜನೆ ಸಂಬಂಧ ನಾವು ಈಗಾಗಲೇ ಟೆಂಡರ್ ಕರೆದಿದ್ದೇವೆ. ಗೋವಾ ರಾಜ್ಯದ ರಾಜಕಾರಣ ಬದಿಗಿಟ್ಟು ನಮ್ಮ ರಾಜ್ಯದ ಶಕ್ತಿಯನ್ನು ಪ್ರದರ್ಶಿಸಿ, ರೈತರು ಹಾಗೂ ಜನರ ಬದುಕಿನ ಬಗ್ಗೆ ಆಲೋಚಿಸೋಣ. ನಾವು ರಾಜಕೀಯವನ್ನು ಮುಂದಿನ ಎರಡೂವರೆ ವರ್ಷಗಳ ಬಳಿಕ ಮಾಡೋಣ. ಈಗ ರಾಜ್ಯದ ಜನರಿಗಾಗಿ ಕೃಷ್ಣ, ಮಹದಾಯಿ, ಕಾವೇರಿ ವಿಚಾರವಾಗಿ ಒಂದಾಗಿ ಕೆಲಸ ಮಾಡೋಣ ಎಂದರು.

ಇದನ್ನೂ ನೋಡಿ : KBL ಕ್ಯಾಂಟೀನ್ | ಇಲ್ಲಿ 1ರೂ ಗೆ ಹೊಟ್ಟೆ ತುಂಬುವಷ್ಟು ಟಿಫನ್ ಸಿಗುತ್ತೆ! Janashakthi Media

Donate Janashakthi Media

Leave a Reply

Your email address will not be published. Required fields are marked *