ಗುಜರಾತ್‍ ತೂಗು ಸೇತುವೆ ದುರಂತ: ನ್ಯಾಯಾಂಗ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ನವದೆಹಲಿ: ಗುಜರಾತ್ ಮೋರ್ಬಿ ತೂಗು ಸೇತುವೆ ಕುಸಿದುಬಿದ್ದು, ದುರಂತ ಸಂಭಿವಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತೇನೆ. ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೇತುವೆ ಯಾಕೆ ಕುಸಿದಿದೆ. ಅಲ್ಲಿ ಇಷ್ಟು ಜನರು ಓಡಾಡಲು ಅವಕಾಶ ನೀಡಿದವರು ಯಾರು? ಈ ಎಲ್ಲದರ ಬಗ್ಗೆ ಸುಪ್ರೀಂಕೋರ್ಟ್  ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಮೃತರ ಕುಟುಂಬಕ್ಕೆ ಪರಿಹಾರ ಸೇರಿದಂತೆ ಎಲ್ಲ ಅಗತ್ಯ ನೆರವನ್ನು ನೀಡಬೇಕೆಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ನಾಯಕರು ಮೋರ್ಬಿಗೆ ಭೇಟಿ ನೀಡಿ, ಸಂತ್ರಸ್ತ ಕುಟುಂಬಸ್ಥರಿಗೆ ಸಹಾಯ ಮಾಡಲಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ರಾಜ್ಯದ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಭೇಟಿ ನೀಡಲಿದ್ದಾರೆ. ಈ ವಿಚಾರದಲ್ಲಿ ನಾವು ಯಾವುದೇ ರಾಜಕೀಯ ಮಾಡಲು ಬಯಸುವುದಿಲ್ಲ ಮತ್ತು ಈಗಲೇ ಯಾರನ್ನೂ ದೂಷಿಸಲು ಬಯಸುವುದಿಲ್ಲ. ತನಿಖಾ ವರದಿ ಬಂದ ನಂತರ ಸತ್ಯ ತಿಳಿಯಲಿದೆ. ಆಗ ಏನು ಕ್ರಮವಹಿಸಲಾಗುತ್ತದೆ ಎಂದು ನೋಡುತ್ತೇವೆ ಎಂದರು.

Donate Janashakthi Media

Leave a Reply

Your email address will not be published. Required fields are marked *