ಸಿಎಂ ಬೊಮ್ಮಾಯಿ ಕಾಲಿನ ಕೆಳಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಕಿ ಅಪಮಾನ

ದೇವನಹಳ್ಳಿ: ಬಿಜೆಪಿ ಕಾರ್ಯಕ್ರಮವೊಂದಕ್ಕೆ ಅಳವಡಿಸಿರುವ ಬ್ಯಾನರ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲಿನ ಬಳಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಕಿ ಅಪಮಾನ ಮಾಡಲಾಗಿದೆ. ಈ ಬ್ಯಾನರ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿಯು ದೂರಿದೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಜಾ ವಿಮೋಚನಾ ಬಹುಜನ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ನಾಗರಾಜ್  ಅವರು, ಕೂಡಲೇ ಈ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಬೇಕು. ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂವಿಧಾನ ಸೇರಿದಂತೆ ಅಂಬೇಡ್ಕರ್ ಅವರಿಗೆ ಅಪಮಾನವಾಗುವಂತಹ ಘಟನೆಗಳು ನಡೆಯುತ್ತಿವೆ ಎಂದು ದೂರಿದರು.

ಇದನ್ನೂ ಓದಿ ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಕೊಲ್ಲುತ್ತಿದ್ದೆ: ಹಿಂದುತ್ವ ನಾಯಕನ ವಿವಾದಾತ್ಮಕ ಹೇಳಿಕೆ

ಕಳೆದ ಒಂದು ತಿಂಗಳ ಹಿಂದೆಯೂ ಕೂಡ ದಲಿತರು ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅಪಮಾನ ಮಾಡಲಾದ ಕಿರುನಾಟಕವೊಂದನ್ನು ಪ್ರದರ್ಶಿಸಿ ಬೆಂಗಳೂರು ನಗರದ ಜೈನ್‌ ವಿಶ್ವವಿದ್ಯಾಲಯದ ಆರು ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿತ್ತಲ್ಲದೆ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಸಂಬಂಧ ರಾಜ್ಯದಾದ್ಯಂತ ಹಲವಾರು ದಲಿತಪರ ಸಂಘಟನೆಗಳು ಆಕ್ರೋಶ ಹೊರಹಾಕುವ ಮೂಲಕ ಸಾಕಷ್ಟು ಪ್ರತಿಭಟನೆ ನಡೆಸಿದ್ದರು.

Donate Janashakthi Media

Leave a Reply

Your email address will not be published. Required fields are marked *