ಸರ್ಕಾರ ರಚನೆಗೆ ಕಾಂಗ್ರೆಸ್ ನಿಂದ ಹಕ್ಕು ಮಂಡನೆ

ಬೆಂಗಳೂರು :- ನೂತನ ಸರ್ಕಾರ ರಚನೆಗೆ ಕಾಂಗ್ರೆಸ್ ಹಕ್ಕುಮಂಡನೆ ಸಲ್ಲಿಸಿದ್ದು, ರಾಜ್ಯಪಾಲರನ್ನು ಭೇಟಿಯಾದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಸರ್ಕಾರ ರಚನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಅಧಿಕೃತ ಪ್ರತಿನಿಧಿಯಾಗಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಡಾ.ಜಿ.ಪರಮೇಶ್ವರ್, ಮೇ 20ರಂದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಿಗದಿ ಮಾಡಲು ಮನವಿ ಸಲ್ಲಿಸಿದರು.

ಪ್ರಮಾಣವಚನ ಸ್ವೀಕಾರ ನಿಗದಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ ಮನವಿ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷವು ತಮ್ಮ ಸರ್ಕಾರ ರಚನೆ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ.

ಇದನ್ನೂ ಓದಿಸಿದ್ದರಾಮಯ್ಯ ಸಿಎಂ; ಡಿ.ಕೆ. ಶಿವಕುಮಾರ್ ಡಿಸಿಎಂ : ಎಐಸಿಸಿಯಿಂದ ಅಧಿಕೃತ ಘೋಷಣೆ

ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿಯಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ನಮಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ ಮನವಿ ಮಾಡಿಕೊಂಡಿದೆ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಹಗ್ಗ ಜಗ್ಗಾಟ ನಡೆಸಿದ್ದರು. ನಾಲ್ಕು ದಿನಗಳ ಕಾಲ ನಿರಂತರವಾಗಿ ದೆಹಲಿಯಲ್ಲಿ ಸಭೆಗಳು ನಡೆಯುತ್ತಿದ್ದವು ಅಂತಿಮವಾಗಿ ‘ಹೈ’ ಅಲರ್ಟ್ ನೊಂದಿಗೆ ಹಗ್ಗ ಜಗ್ಗಾಟ ಕೊನೆಗೊಂಡಿದೆ. ಇದರ ಬೆನ್ನಲ್ಲೆ ಡಾ. ಜಿ ಪರಮೇಶ್ವರ ನೇತೃತ್ವದ ನಿಯೋಗ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

 

Donate Janashakthi Media

Leave a Reply

Your email address will not be published. Required fields are marked *