ಬೆಂಗಳೂರು : ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ, ವೈಚಾರಿಕ ವಿಮರ್ಶಕ ಡಾ.ಮೊಗಳ್ಳಿ ಗಣೇಶ್(62) ಅಲ್ಪಕಾಲದ ಅನಾರೋಗ್ಯದಿಂದ ರವಿವಾರ ಬೆಳಗ್ಗೆ 7:30ರ ಸುಮಾರಿಗೆ ನಿಧನರಾಗಿದ್ದಾರೆ. ಮೊಗಳ್ಳಿ ಗಣೇಶ್
ಇತ್ತೀಚೆಗೆ ತಾನೇ ಅವರ ಆತ್ಮಕತೆ ʼನಾನೆಂಬುದು ಕಿಂಚಿತ್ತುʼ ಬಿಡುಗಡೆಯಾಗಿತ್ತು. ಕನ್ನಡ ಕಥನ ಪರಂಪರೆಗೆ ಹೊಸತನ ನೀಡಿದ ಮೊಗಳ್ಳಿ ಗಣೇಶ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು.
ಇದನ್ನೂ ಓದಿ : ಯಲ್ಲಾಲಿಂಗ ಕೊಲೆ ಪ್ರಕರಣ| ಬಲಾಡ್ಯರ ಕಡೆ ವಾಲಿದ ನ್ಯಾಯ – ಮತ್ತೊಮ್ಮೆ ಯಲ್ಲಾಲಿಂಗನ ಕೊಲೆ ಮೊಗಳ್ಳಿ ಗಣೇಶ್
ಮೊಗಳ್ಳಿ ಗಣೇಶ್ 1963ರ ಜುಲೈ 1 ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನ ಹಳ್ಳಿಯಲ್ಲಿ ಜನಿಸಿದರು. ಮೊಗಳ್ಳಿ ಗಣೇಶರು ಓದಿದ್ದು ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಅರ್ಥಶಾಸ್ತ್ರ. ಅವರ ಬುಗುರಿ, ನನ್ನಜ್ಜನಿಗೊಂದಾಸೆಯಿತ್ತು, ಒಂದು ಹಳೆಯ ಚಡ್ಡಿ ಇತ್ಯಾದಿ ಕಥೆಗಳು ಕನ್ನಡದ ಅತ್ಯುತ್ತಮ ಸಣ್ಣ ಕಥೆಗಳಾಗಿ ಗುರುತಿಸಲ್ಪಟ್ಟಿವೆ. ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯಲ್ಲಿ ಅವರ ಕಥೆಗಳು ನಾಲ್ಕು ಬಾರಿ ಬಹುಮಾನ ಪಡೆದಿದ್ದವು. ಡಾ. ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ, ಮಾಸ್ತಿ ಕಥಾ ಪ್ರಶಸ್ತಿ, ಕರ್ನಾಟಕ ಅಕಾಡಮಿ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು. ಮೊಗಳ್ಳಿ ಗಣೇಶ್
‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಅವರ ಕಾವ್ಯ ಸಂಕಲನಗಳು. ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಎಂಬ 986 ಅವರ ಬೃಹತ್ ಕಾದಂಬರಿ ತಯಾರಾಗಿದೆ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ.
ಇದನ್ನೂ ನೋಡಿ : RSS ದೇಶದ್ರೋಹಿ ಸಂಘಟನೆ – ಬಿ.ಕೆ. ಹರಿಪ್ರಸಾದ್ Janashakthi Media ಮೊಗಳ್ಳಿ ಗಣೇಶ್
