ವಿಷ್ಣುವರ್ಧನ್ ಭಾವುಕ ಜೀವಿ, ಮಾನವೀಯತೆಯಿಂದ ಮೆರೆದವರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು: ಸಾಹಸ ಸಿಂಹ ವಿಷ್ಣುವರ್ಧನ್ ಜನರ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದೆ ಉಳಿದುಕೊಂಡಿದ್ದಾರೆ. ವಿಷ್ಣುವರ್ಧನ್ ಭಾವುಕ ಜೀವಿ, ಮಾನವೀಯತೆಯಿಂದ ಮೆರೆದವರು. ಅವರ ಪಾತ್ರದಲ್ಲಿಯೂ ಮಾನವೀಯತೆ ಎದ್ದು ಕಾಣುತ್ತಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘೀಸಿದರು.

ಮೈಸೂರಿನ ಮಾನಂದವಾಡಿ ರಸ್ತೆಯ ಹಾಲಾಳು ಗ್ರಾಮದ ಉದ್ಬೂರ್ ಗೇಟ್ ಬಳಿ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಿರ್ಮಿಸಿರುವ ʻಡಾ.ವಿಷ್ಣುವರ್ಧನ್ ಸ್ಮಾರಕ ಭವನʼ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಾ.ವಿಷ್ಣುವರ್ಧನ್ ಅವರು ಇಡೀ ಕರುನಾಡು ‌ಮೆಚ್ಚಿದ ಹೃದಯವಂತ, ತಮ್ಮ ಅಭಿನಯದಿಂದಲೇ ಜನಮನ ಗೆದ್ದ ಅಪ್ರತಿಮ ನಟ. ನಾಗರಹಾವು ಸಿನಿಮಾದ ರಾಮಾಚಾರಿ ಪಾತ್ರದ ಮೂಲಕ ಎಲ್ಲರ ಮನೆಮಾತಾದ ಡಾ.ವಿಷ್ಣುವರ್ಧನ್ ಯಾವುದೇ ಪಾತ್ರಕ್ಕೂ ಸೈ ಎನ್ನುವಂತೆ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ ಎಂದರು.

ಇದನ್ನು ಓದಿ: 13 ವರ್ಷದ ಬಳಿಕ ಉದ್ಘಾಟನೆಗೆ ಸಿದ್ಧಗೊಂಡಿದೆ ಡಾ.ವಿಷ್ಣು ಸ್ಮಾರಕ; ಅಭಿಮಾನಿಗಳ ಸಂಭ್ರಮ

ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಮಾನಿಗಳ ಒತ್ತಾಯವಾಗಿದೆ. ರಾಜ್ಯ ಸರ್ಕಾರ ಮುಂದಿನ‌ ದಿನಗಳಲ್ಲಿ ಅದರ ಬಗ್ಗೆ ಪರಿಶೀಲಿಸಿ, ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,

ಡಾ.ವಿಷ್ಣುವರ್ಧನ್ ಅವರ ಪತ್ನಿ, ಭಾರತಿ ವಿಷ್ಣುವರ್ಧನ್​ ಅವರು ಸ್ಮಾರಕವನ್ನು ವಿಷ್ಣುವರ್ಧನ್ ಜನಿಸಿದ ಮೈಸೂರಿನಲ್ಲೇ ನಿರ್ಮಾಣ ಮಾಡಬೇಕೆಂದು ವಿಶೇಷ ಕಾಳಜಿ ವಹಿಸಿ ಶ್ರಮಿಸಿದರು ಮತ್ತು ಅದನ್ನು ಅವರು ಸಾಧ್ಯವಾಗಿಸಿದ್ದಾರೆ. ಈ ಭವ್ಯ ಸ್ಮಾರಕದಲ್ಲಿ ಎಲ್ಲಾ ಸೌಲಭ್ಯ ಇದೆ. ಸಾರ್ವಜನಿಕರು ಹಾಗೂ ಚಿತ್ರರಂಗ ಇದರ ಅನುಕೂಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಜತ್ಕರ್​, ವಿಷ್ಣುವರ್ಧನ್ ಕುಟುಂಬಸ್ಥರು ಮಾತನಾಡಿದರು. ಈ ವೇಳೆ ಸಂಸದ ಪ್ರತಾಪಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಮೇಯರ್ ಶಿವಕುಮಾರ್, ಮುಡಾ ಅಧ್ಯಕ್ಷ ಯಶಸ್ವಿ ಎಸ್. ಸೋಮಶೇಖರ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಉಪ ಮೇಯರ್ ಡಾ.ಡಿ.ರೂಪಾ ಇದ್ದರು.

ಇದನ್ನು ಓದಿ: ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವೇದಿಕೆ ಮುಂಭಾಗದಲ್ಲಿ ನಟಿ ಭವ್ಯಾ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ರಮೇಶ್ ಭಟ್ ಹಾಗೂ ವಿಷ್ಣುವರ್ಧನ್ ಕುಟುಂಬದ ಸದಸ್ಯರು ಇದ್ದರು.

ಸ್ಮಾರಕದಲ್ಲಿ ವಿಷ್ಣುವರ್ಧನ್‌ ಅವರು ‘ಆಪ್ತರಕ್ಷಕ’ ಚಲನಚಿತ್ರದ ಪಾತ್ರದ ಮಾದರಿಯಲ್ಲಿ ನಿರ್ಮಿಸಲಾದ 7 ಅಡಿ ಎತ್ತರದ ಪ್ರತಿಮೆಯನ್ನೂ ಅನಾವರಣಗೊಳಿಸಲಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *