ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಲಾಗಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವೈಯಾಲಿಕಾವಲ್ ನ ಐಪಿಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ.

ಇದನ್ನು ಓದಿ : ಮೋದಿ ಅಲೆ ಕಾಣಲಿಲ್ಲ; ಗ್ಯಾರಂಟಿ ಅಲೆಯೇ ಎಲ್ಲ, 20 ಸ್ಥಾನದಲ್ಲಿ ಗೆಲುವು: ಈಶ್ವರ ಖಂಡ್ರೆ

ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ.

ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್‌ ಜೊತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ”.ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಕೇಳಿದಾಗ, “ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು. ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ” ಎಂದರು.

ಇದನ್ನು ನೋಡಿ : ಎರಡು ಕೋಟಿ ಉದ್ಯೋಗ : ಎಲ್ಲಿ ಹೋದವು? ಮೋದಿ ಸರ್ಕಾರದ ಉತ್ತರವೇನು? Janashakthi Media

Donate Janashakthi Media

Leave a Reply

Your email address will not be published. Required fields are marked *