ಬೆಳಗಾವಿ: ಏಪ್ರಿಲ್ 2ರಂದು ಬಸ್ ಚಾಲಕನೊಬ್ಬ ಬಸ್ಸಿನಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎರಡನೇ ಡಿಪೊದಲ್ಲಿ ನಡೆದಿದೆ.
ಇಲ್ಲಿನ ಹಳೆ ಗಾಂಧಿನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಮೃತರಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು. ಅದೇ ಬಸ್ಸಿನಲ್ಲಿ ಬುಧವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಸುಂಕದ ಮನುಷ್ಯನ ಸಲ್ಲದ ಪ್ರಲಾಪ
ಮನೆಯಲ್ಲಿ ಬಾಲಚಂದ್ರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.
ಎರಡು ವಾರಗಳ ಹಿಂದಷ್ಟೇ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮೆಕ್ಯಾನಿಕ್ ಕೂಡ ಬಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನೂ ನೋಡಿ: ವಚನಾನುಭವ 24| ನಿಮ್ಮ ತೊತ್ತು ಸೇವೆಯೇ ಸಾಕು | ಗಜೇಶ ಮಸಣಯ್ಯ Janashakthi Media