ಬೆಂಗಳೂರು: ರಾಜ್ಯದಲ್ಲಿ ಈಗಷ್ಟೇ ಮುಂಗಾರು ಆರಂಭವಾಗಿದ್ದು, ಬಿಸಿಲ ಬರದಿಂದ ಕಂಗೆಟ್ಟಿದ್ದ ರೈತನಿಗೆ ಆಸರೆಯನ್ನುವಂತೆ ಮಳೆಯ ಸಿಂಚನಗಳಾಗುತ್ತಿದ್ದು, ಕೃಷಿ ಚಟುವಟಿಕೆ ಆರಂಭಗೊಂಡಿದೆ. ಬರಪರಿಹಾರ
ಹೀಗಾಗಿ ರೈತರಿಗೆ ಬಂದಿರುವ ಬರಪರಿಹಾರವನ್ನು ಬ್ಯಾಂಕ್ ತನ್ನ ಸಾಲಕ್ಕೆ ವಜಾಮಾಡಿಕೊಳ್ಳುತ್ತಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ್ದು, ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದನ್ನು ಓದಿ : ಅಸಮರ್ಥ ಗೃಹ ಸಚಿವರನ್ನು ಕೂಡಲೇ ವಜಾ ಮಾಡಲು ಪಿ. ರಾಜೀವ್ ಆಗ್ರಹ
ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಇಂದು ಗುರುವಾರ ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಪರಿಹಾರಕಾಗಿ ನಡೆಸಿದ ವಿಡೀಯೋ ಸಂವಾದದಲ್ಲಿ ಸೂಚಿಸಿದ್ದು, ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ ಎಂಬುದನ್ನು ಅಧಿಕಾರಿಗಳಿಗೆ ಸಿಎಂ ಸ್ಪಷ್ಟಪಡಿಸಿದ್ದಾರೆ.ಅಲ್ಲದೇ ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದರು.
ಇದನ್ನು ನೋಡಿ : ಲೈಂಗಿಕ ಹತ್ಯಾಕಾಂಡ :ಪ್ರಜ್ವಲ್ ಬಂಧನ ವಿಳಂಬಕ್ಕೆ ಹೈಕೋರ್ಟ್ ವಕೀಲ ಬಿ.ಟಿ.ವೆಂಕಟೇಶ್ ಆಕ್ರೋಶ