ಡ್ರಗ್ಸ್‌ ಪ್ರಕರಣ: ನಟಿ ಸಂಜನಾ 5 ದಿನ ಸಿಸಿಬಿ ವಶಕ್ಕೆ

  • ಬೆಳಗ್ಗೆ ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು

 

ಬೆಂಗಳೂರು:  ​ ಡ್ರಗ್ಸ್​ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾರನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಂಜನಾ

ಈಗಷ್ಟೇ ಸಿಸಿಬಿ ಪೊಲೀಸರು ನಟಿ ಸಂಜನಾರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 8ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಈ ವೇಳೆ ಸಿಸಿಬಿ ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಧೀಶರು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.

ನಟಿ ರಾಗಿಣಿ ಬೆನ್ನಲ್ಲೀಗ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಿದ್ದಾರೆ. ಡ್ರಗ್ಸ್ ದಂಧೆ ಸಂಬಂಧ ರಾಹುಲ್ ಶೆಟ್ಟಿ ಎಂಬುವವರನ್ನು ಸಿಸಿಬಿ ಬಂಧಿಸಿದ್ದರು. ಈ ವೇಳೆ ಸಂಜನಾ ಬಗ್ಗೆ ಪೊಲೀಸರ ರಾಹುಲ್ ಶೆಟ್ಟಿ ಬಾಯಿಬಿಟ್ಟಿದ್ದ. ರಾಹುಲ್ ಜೊತೆ ಹಲವು ಪಾರ್ಟಿಗಳಲ್ಲಿ ಸಹ ಸಂಜನಾ ಕಾಣಿಸಿಕೊಳ್ಳುತ್ತಿದ್ದರು ಎನ್ನಲಾಗಿತ್ತು. ಹೀಗಾಗಿ ಸಂಜನಾರನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಿಗ್ಗೆಯೇ ಸಂಜನಾರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಸತತ ವಿಚಾರಣೆ ಬಳಿಕ ಸಿಸಿಬಿ ಅಧಿಕಾರಿಗಳು ಸಂಜನಾರನ್ನು ಬಂಧಿಸಿದ್ದರು. ಬಳಿಕ ಸಂಜನಾಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್​​ಗೆ ಹಾಜರುಪಡಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *