ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತ; ಪ್ರತಿಭಟಿಸಿದ ಕುಟುಂಬಸ್ಥರು

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ  ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತಪಟ್ಟ ಘಟನೆ ನಡೆದಿದ್ದು, ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕಲ್ಪನಾ ರಾಠೋಡ ಮೃತ ಮಹಿಳೆ.

ಸೋಮವಾರ ರಾತ್ರಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ನಿವಾಸಿ ಕಲ್ಪನಾಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸಿ ಗಂಡು ಮಗುವನ್ನು ಹೊರತೆಗೆದಿದ್ದರು. ಈ ವೇಳೆ ವೈದ್ಯರು ತಾಯಿ, ಮಗು ಆರೋಗ್ಯವಾಗಿದ್ದಾರೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದರು.

ಆದರೆ ಮಂಗಳವಾರ ಬೆಳಗ್ಗೆ ಕಲ್ಪನಾಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆಗಿದೆ ಎಂದು ಹೇಳಿದ್ದಾರೆ. ಕೆಲ ಸಮಯದ ನಂತರ ಬಾಣಂತಿ ಮೃತಪಟ್ಟಿದ್ದಾಗಿ ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿನ ಹಿಂಸಾಚಾರ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ: ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿದ ಮಲ್ಲಿಕಾರ್ಜನ ಖರ್ಗೆ

ಈ ವೇಳೆ ಕುಟುಂಬಸ್ಥರು, ಆರೋಗ್ಯ ಹದಗೆಟ್ಟಿದ್ದರೆ ಬೇರೆ ಆಸ್ಪತ್ರೆಗೆ ರವಾನಿಸಲು ಅವಕಾಶ ಕೊಡಿ ಎಂದು ವೈದ್ಯರಲ್ಲಿ ಮನವಿ ಮಾಡಿದ್ದಾರೆ. ಆದರೆ ಬಿಮ್ಸ್ ವೈದ್ಯರು ಯಾವುದೇ ಸ್ಪಂದನೆ ನೀಡಿಲ್ಲ. ಘಟನೆಯ ಹಿನ್ನೆಲೆಯಲ್ಲಿ ಮಗಳ ಸಾವಿಗೆ ವೈದ್ಯರ ನಿರ್ಲಕ್ಷ ಕಾರಣ ಎಂದು ಮಹಿಳೆ ಕುಟುಂಬದವರು ಆಕ್ರೋಶ ಹೊರಹಾಕಿ ಆಸ್ಪತ್ರೆ ಆವರಣದಲ್ಲಿ ಸಂಬಂಧಿಕರು ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ನೋಡಿ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *