ಜಾರ್ಖಂಡ್: ಬೊಕಾರೊ ಜಿಲ್ಲೆಯಲ್ಲಿ ಶನಿವಾರ ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ 10 ಮಂದಿ ಗಾಯಗೊಂಡಿದ್ದು ನಾಲ್ವರು ಸಾವನ್ನಪ್ಪಿದ್ದಾರೆ.
ಖೆಟ್ಕೊ ಎನ್ನುವ ಗ್ರಾಮದಲ್ಲಿ ಮೊಹರಂ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಕಬ್ಬಿಣದಿಂದ ಮಾಡಿದ ಧಾರ್ಮಿಕ ಧ್ವಜವು 11 ಸಾವಿರ ವೋಲ್ಟ್‌ನ ವಿದ್ಯುತ್ ತಂತಿಗೆ ತಾಗಿದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಬೊಕಾರೊಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ತಿಳಿಸಿದ್ದಾರೆ.
ಇದನ್ನೂ ಓದಿ:ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಪ್ರಕರಣ:ಸಿಬಿಐನಿಂದ ತನಿಖೆ
ಶನಿವಾರ ಬೆಳಿಗ್ಗೆ 6 ಗಂಟೆ ಸಮಯದ ವೇಳೆ ಈ ಘಟನೆ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಎಂಟು ಮಂದಿಗೆ ಸಣ್ಣಪುಟ ಗಾಯಗಳಾಗಿದ್ದಾವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.