ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್‌ಐ ಮುತ್ತಿಗೆ

ಮಂಗಳೂರು : ಮಂಗಳೂರಿನ ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್‌ಐ ಸಂಘಟನೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.

ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟ ಮಾಡಲಾಗುತ್ತಿದೆ ಎಂದು ಡಿವೈಎಫ್ಐ ಆರೋಪಿಸಿದೆ.

ಜಿಲ್ಲ ಕಾರ್ಯದರ್ಶಿ ಸಂತೋಷ ಬಜಾಲ್
ಪ್ರತಿಭಟನೆ ಉದ್ದೇಶಿಸಿ ಮಾತನಾಡುತ್ತಾ, ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ ವ್ಯಾಪಾರಿಗಳು, ಕಾರ್ಮಿಕರು, ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರನ್ನು ಈ ಅಡ್ಡೆ ಗುರಿಯಾಗಿಸಿ ಜನರ ದುಡಿಮೆಯ ಹಣವನ್ನು ದೋಚುವ ಕಾರ್ಯದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮಾತನಾಡಿ, ಈ ಮೋಸದಾಟಕ್ಕೆ ಸಿಲುಕಿದ ಬಹಳಷ್ಟು ಕುಟುಂಬಗಳು ತಮ್ಮ ಮನೆ, ಮಠ ಅಮೂಲ್ಯ ಸೊತ್ತುಗಳನ್ನು ಕಳಕೊಂಡು ಬೀದಿಗೆ ಬಿದ್ದಿವೆ. ಇಂತಹ ಅಕ್ರಮ ಜೂಜು ಕೇಂದ್ರಗಳ ವಿರುದ್ಧ ಸಾರ್ವಜನಿಕರು ಬಹಳಷ್ಟು ವಿರೋಧ ವ್ಯಕ್ತಪಡಿಸಿದರೂ ಸ್ಥಳೀಯ ಠಾಣೆಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬರೀ ತೋರಿಕೆಗಷ್ಟೇ ಬಂದ್ ಮಾಡುವ ನಾಟಕ ಮಾಡಿ ಮತ್ತೆ ಕೆಲ ದಿನದ ನಂತರ ಯಥಾ ಸ್ಥಿತಿಯಾಗಿ ಜೂಜು ಕೇಂದ್ರಗಳು ಕಾರ್ಯಾಚರಿಸುತ್ತವೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು, ನವೀನ್ ಕೊಂಚಾಡಿ, ಹನೀಫ್ ಬೆಂಗ್ರೆ, ಮುಸ್ತಫಾ ಕಲ್ಲಕಟ್ಟೆ, ರಿಯಾಬ್, ಆಸೀಫ್, ಸಾದಿಕ್ ಉಪಸ್ಥಿತರಿದ್ದರು.

 

Donate Janashakthi Media

Leave a Reply

Your email address will not be published. Required fields are marked *