ಡಿವೈಎಫ್‌ಐ ವತಿಯಿಂದ ಸುಭಾಶ್‌ ಚಂದ್ರಬೋಸ್‌ ಜನ್ಮದಿನ ಆಚರಣೆ

ಸಂಡೂರು: ಸ್ವಾತಂತ್ರ್ಯ ಸೇನಾನಿ ಸುಭಾಶ್‌ ಚಂದ್ರಬೋಸ್‌ ಅವರ 126ನೇ ಜನ್ಮದಿನದ ಪ್ರಯುಕ್ತಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌(ಡಿವೈಎಫ್‌ಐ) ವತಿಯಿಂದ ಅಂಗವನಾಡಿ ವಿದ್ಯಾರ್ಥಿಗಳಿಗೆ ಶಾಲಾ ಪಾಠಿ ವಿತರಣೆ ಮಾಡಿ ಸಿಹಿ ಹಂಚಿದರು.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ  ತೋರಣಗಲ್ಲು ಗ್ರಾಮದಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಇಂತಹ ಸ್ಪೂರ್ತಿದಾಯಕವಾದ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕೆಂದು ಭಾಗವಹಿಸಿದ ಅತಿಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಘಟಕ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಿದ್ದು, ಅದರೊಂದಿಗೆ ವಿಚಾರ ಸಂಕಿರಣ ಆಯೋಜಿಸಲಾಗುವುದು ಸಂಘಟಕರಾದ ಡಿವೈಎಫ್‌ಐ ಸಂಡೂರು ತಾಲ್ಲೂಕು ಸಾಂಸ್ಕೃತಿಕ ಕಾರ್ಯದರ್ಶಿ ನಾಗಭೂಷಣ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಿವೈಎಫ್‌ಐ ಸಂಗಾತಿಗಳಾದ ಸ್ವಾಮಿ, ಕೃಷ್ಣ, ಯನ್ನಪ್ಪ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳು, ಸಹಾ ಶಿಕ್ಷಕರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು, ಮತ್ತಿತರು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *