ಪೆಟ್ರೋಲ್‌,ಡಿಸೇಲ್‌ ಬೆಲೆ ಏರಿಕೆ ಖಂಡಿಸಿ ಯುವಜನರಿಂದ ಪ್ರತಿಭಟನೆ

ವಿಟ್ಲ :ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಇಂದು ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಮಂಗಳಪದವು ಪೆಟ್ರೋಲ್ ಪಂಪ್ ಮುಂಭಾಗ ಪ್ರತಿಭಟನೆ ನಡೆಯಿತು .

ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.(ಎಂ )ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಚ್ಚಾ ತೈಲದ ಬೆಲೆ ಇಳಿಕೆಯಾದರೂ ಮೋದಿ ಸರಕಾರ ದರ ಇಳಿಸದೆ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ಅಚ್ಚೇ ದಿನದ ಹೆಸರಿನಲ್ಲಿ ಜನರ ಬದುಕನ್ನು ನಿರ್ನಾಮ ಮಾಡಲು ಹೊರಟ ಬಿ.ಜೆ.ಪಿ ಸರಕಾರದ ವಿರುದ್ಧ ಜನತೆ ದೊಡ್ಡ ಮಟ್ಟದ ಜನಾಂದೋಲನ ನಡೆಸಬೇಕು ಎಂದು ಕರೆ ನೀಡಿದರು.

ವಾಹನಕ್ಕೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ವಿನೂತನವಾಗಿ ಪ್ರತಿಭಟನೆ ಆರಂಭಿಸಲಾಯಿತು .ಪ್ರತಿಭಟನೆಯಲ್ಲಿ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ತುಳಸೀದಾಸ್ ವಿಟ್ಲ, ರಿಕ್ಷಾ ಚಾಲಕರ ಸಂಘದ ಕಾರ್ಯದರ್ಶಿ ರಝಾಕ್ ಕೆಲಿಂಜ , ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ಮುಖಂಡರಾದ ಸಲೀಂ ಮಲಿಕ್, ಸಲ್ಮಾನ್ ಪಿ.ಬಿ,ಜಮೀಲ್, ಇರ್ಪಾನ್ ,ಇಬ್ರಾಹಿಂ ಭಾಸಿಂ, ಸುಲೈಮಾನ್ ಪೆಲತ್ತಡ್ಕ, ಹನೀಪ್ ಕೆಲಿಂಜ, ಹನೀಪ್ ಆಲಂಗಾರ್, ಸಮೀರ್ ಪಾತ್ರತೋಟ, ಸಾಭಿತ್ ಕೆಲಿಂಜ, ಅಝಿಝ್ ಕೆಳಿಂಜ,ಸಿನಾನ್, ಮೆಹರೋಫ್ ಒಕ್ಕೆತ್ತೂರು, ಅಝೀಝ್ ಪೆಲತ್ತಡ್ಕ,ಸವಾದ್ ಕೋಲ್ಪೆ , ಶಾಕೀರ್ ಖಾನ್, ಲಿಯಕತ್ ಖಾನ್, ಮೊಹಿದಿನ್ ಕೆದುಮೂಲೆ. ಮುಂತಾದವರು ನೇತೃತ್ವ ವಹಿಸಿದ್ದರು.

ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು  ಲಿಂಕ್ ಕ್ಲಿಕ್ ಮಾಡಿ

Donate Janashakthi Media

Leave a Reply

Your email address will not be published. Required fields are marked *