ಕಲಬುರಗಿ: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮುಂದುವರೆದಿದೆ. ಪರೀಕ್ಷಾ ಕೇಂದ್ರದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೂ ಈಗ ಸಂಕಷ್ಟ ಎದುರಾಗಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ಉಪವಿಭಾಗದ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿಯ ಬೆರಳಚ್ಚು ವಿಭಾಗದ ಆನಂದ ಮೇತ್ರಿ ಸೇರಿ 12 ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಗೃಹ ಇಲಾಖೆ ಅಮಾನತು ಆದೇಶ ಹೊರಡಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರಿಗೆ ಕಳಿಸಲಾಗಿತ್ತು. ಆದೇಶ ಪತ್ರಗಳನ್ನು ಸಿಬ್ಬಂದಿಯ ಮೂಲಕ ಇಲ್ಲಿನ ಐವಾನ್ ಇ ಶಾಹಿ ವಿಚಾರಣೆ ಎದುರಿಸುತ್ತಿರುವ ಮಲ್ಲಿಕಾರ್ಜುನ ಸಾಲಿ ಹಾಗೂ ಆನಂದ ಮೇತ್ರಿ ಅವರಿಗೆ ಇಂದು(ಮೇ 07) ತಲುಪಿಸಲಾಗಿದೆ.
ಪಿಎಸ್‌ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿಯನ್ನು ಸಿಐಡಿ ತಂಡ, ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಯನ್ನು ಗುರುವಾರ ಬಂಧಿಸಲಾಗಿತ್ತು. ಈಗಾಗಲೇ 7 ದಿನಗಳಿಂದ ಸಿಐಡಿ ವಶದಲ್ಲಿರುವ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಮಲ್ಲಿಕಾರ್ಜು ಸಾಲಿ ಅವರನ್ನು ಬಂಧಿಸಲಾಗಿದೆ.
ಸ್ಟೇಷನ್ ಬಜಾರ್ ಠಾಣೆಯ ಮೂವರು, ಮಹಿಳಾ ಠಾಣೆಯ 8 ಸಿಬ್ಬಂದಿ ಅಮಾತನುಗೊಂಡಿದ್ದಾರೆ. ಕಲಬುರಗಿಯ ಜ್ಞಾನಜ್ಯೋತಿ ಶಾಲೆ ಮತ್ತು ಎಂಎಸ್ ಇರಾನಿ ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
10 ಜನ ಸಿಬ್ಬಂದಿಯನ್ನು ಕಲಬುರಗಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ಅಮಾನತುಗೊಳಿಸಿದ್ದಾರೆ. ಪಿಎಸ್ಐಗಳಾದ ಶ್ರೀಶೈಲಮ್ಮ, ನಜ್ಮಾ ಸುಲ್ತಾನಾ, ಎಎಸ್ಐಗಳಾದ ಶಶಿಕುಮಾರ್, ಲತಾ, ಹೆಡ್ ಕಾನ್ಸ್‌ಸ್ಟೆಬಲ್ ಗಳಾದ ಪಾರುಬಾಯಿ, ಜೈಭೀಮ್, ಶರಣಬಸಪ್ಪ, ದಾಮೋದರ್, ಪೊಲೀಸ್ ಕಾನ್ಸ್‌ಸ್ಟೆಬಲ್ ಗಳಾದ ಪ್ರದೀಪ, ರಾಜಶ್ರೀ ಅವರನ್ನು ಅಮಾನತುಗೊಳಿಸಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಕೆಎಸ್ಆರ್‌ಪಿ ಸಹಾಯಕ ಕಮಾಂಡೆಂಟ್ ವೈಜನಾಥ್ ಪ್ರಕರಣದ ಮುಖ್ಯ ಆರೋಪಿ ಆರ್. ಡಿ. ಪಾಟೀಲ್ ಸಂಪರ್ಕದಲ್ಲಿದ್ದರು. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಸ್ತುವಾರಿಯಾಗಿದ್ದರು.