ಚುನಾವಣೆ ವೇಳೆ ಚುನಾವಣಾ ಬಾಂಡ್ ವಿಂಡೋ ಓಪನ್ ಮಾಡಿದ ಕೇಂದ್ರ ಸರ್ಕಾರ | ಭಾರತ ಸರ್ಕಾರದ ಮಾಜಿ ಕಾರ್ಯದರ್ಶಿ ಆಕ್ಷೇಪ

ನವದೆಹಲಿ: ಚುನಾವಣಾ ಬಾಂಡ್‌ಗಳ ಕುರಿತು ಹಣಕಾಸು ಸಚಿವಾಲಯ ಹೊರಡಿಸಿದ ಇತ್ತೀಚಿನ ಅಧಿಸೂಚನೆಯ ಬಗ್ಗೆ ಭಾರತ ಸರ್ಕಾರದ ಮಾಜಿ ಕಾರ್ಯದರ್ಶಿ ಇಎಎಸ್ ಶರ್ಮಾ ಅವರು ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದ್ದು, ಈ ಅಧಿಸೂಚನೆಯು ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಲವು ರಾಜ್ಯಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಗೆ ಲಾಭವಾಗಲೆಂದೆ ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಚುನಾವಣೆ ಇರುವ ವೇಳೆ ಈ ಅಧಿಸೂಚನೆ ಹೊರಡಿಸಿದೆ ಎಂದು ಪ್ರತಿಪಾದಿಸಿರುವ ಅವರು, ಈ ಬಗ್ಗೆ ಗಮನಿಸುವಂತೆ ಪತ್ರದಲ್ಲಿ ಚುನಾವಣಾ ಆಯೋಗಕ್ಕೆ ತಿಳಿಸಿದ್ದಾರೆ. ಅಲ್ಲದೆ, ಈ ಹಿಂದಿನಿಂದಲೂ ಚುನಾವಣೆ ಬಾಂಡ್‌ನಿಂದ ಈ ವರೆಗೆ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂಬುವುದನ್ನು ಇಎಎಸ್ ಶರ್ಮಾ ಸೂಚಿಸಿದ್ದಾರೆ.

ಇದನ್ನೂ ಓದಿ: ಪಿಎಸ್ಐ ಹಗರಣ: ಆರೋಪ ಮಾಡುವ ಮುನ್ನ ಬಿಜೆಪಿ ನಾಯಕರು ಹೋಂವರ್ಕ್ ಮಾಡಿಕೊಂಡು ಬರಲಿ – ಸಚಿವ ಪ್ರಿಯಾಂಕ್​ ಖರ್ಗೆ

6-11-2023 ಮತ್ತು 20-11-2023 ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಅನಾಮಧೇಯ ದೇಣಿಗೆಗಳನ್ನು ಸ್ವೀಕರಿಸಲು ಕೇಂದ್ರ ಸರ್ಕಾರ ಇತ್ತೀಚೆಗೆ ವಿಂಡೋವನ್ನು ತೆರೆದಿತ್ತು. ಕೇಂದ್ರ ಹಣಕಾಸು ಸಚಿವಾಲಯ ಹೊರಡಿಸಿದ ಈ ಅಧಿಸೂಚನೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಪರಸ್ಪರ ಸ್ಪರ್ಧಿಸುತ್ತಿರುವ ಸನ್ನಿವೇಶದಲ್ಲಿ, ಹೆಚ್ಚಿನ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸುವ ಪಕ್ಷವಾದ ಬಿಜೆಪಿ ಬಾಂಡ್‌ಗಳ ಬಗ್ಗೆಗಿನ ಅಧಿಸೂಚನೆಯ ಸಮಯವನ್ನು ನಿರ್ಧರಿಸುವುದು ಇತರ ಪಕ್ಷಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಅದನ್ನು ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಶರ್ಮಾ ಅವರು ಕೇಳಿದ್ದಾರೆ.

ಇದನ್ನೂ ಓದಿ: ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

“ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಗಳ ಮೂಲಗಳನ್ನು ಮತ್ತು  ಮುಂಬರುವ ವಾರಗಳಲ್ಲಿ ಅಸೆಂಬ್ಲಿ ಚುನಾವಣೆಗಳು ನಡೆಯಲಿರುವ ರಾಜ್ಯಗಳಲ್ಲಿ ಅವುಗಳನ್ನು ಹಾಕಲಾಗುತ್ತದೆಯೇ ಎಂದು ಪರಿಶೀಲಿಸಿ” ಎಂದು ಶರ್ಮಾ ಅವರು ಚುನಾವಣಾ ಆಯೋಗವನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ದೇಣಿಗೆಗಳು ಮುಖ್ಯವಾಗಿ ಕೇಂದ್ರದ ಆಡಳಿತಾರೂಢ ಪಕ್ಷವಾದ ಬಿಜೆಪಿ ಪರವಾಗಿರುವುದರಿಂದ, ಅದರ ಸಂಭವನೀಯತೆ, ಅದರ ವಿವೇಕ, ಆಧಾರವಾಗಿರುವ ಉದ್ದೇಶಗಳು ಮತ್ತು ನಂತರದ ಅಸೆಂಬ್ಲಿ ಚುನಾವಣೆಗಳ ಸಮಗ್ರತೆಗೆ ಅಧಿಸೂಚನೆಯ ಸಂಭವನೀಯ ಪ್ರತಿಕೂಲ ಪರಿಣಾಮಗಳ ಬಗ್ಗೆ ಗಂಭೀರ ಕಳವಳ ಉಂಟು ಮಾಡುತ್ತದೆ ಎಂದು ಅವರು ಇಎಎಸ್ ಶರ್ಮಾ ಹೇಳಿದ್ದಾರೆ.

ವಿಡಿಯೊ ನೋಡಿ: 9 ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ನೌಕರರ ಪ್ರತಿಭಟನೆ – ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆJanashakthi Media

Donate Janashakthi Media

Leave a Reply

Your email address will not be published. Required fields are marked *