ವಿಜಯಪುರ: ಇಂದು ಬೆಳ್ಳಂಬೆಳಗ್ಗೆ ಗುಮ್ಮಟನಗರಿ ವಿಜಯಪುರ ಜಿಲ್ಲೆಯಾದ್ಯಂತ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವವಾಗಿದೆ. 3 ರಿಂದ 4 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದೆ.
ವಿಜಯಪುರ ನಗರ, ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಇಂದು ಬೆಳಗ್ಗೆ 6.21 ರ ಸುಮಾರಿಗೆ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ವಿಜಯಪುರ ನಗರ ಕೇಂದ್ರದಲ್ಲಿ ಮಾತ್ರವಲ್ಲದೆ, ಜಿಲ್ಲೆಯಾದ್ಯಂತ ಹಲವೆಡೆ ಭೂಕಂಪನ ಅನುಭವವಾಗಿದೆ. ವಿಜಯಪುರ, ತಿಕೋಟಾ, ಬಬಲೇಶ್ವರ, ಇಂಡಿ ಹಾಗೂ ಚಡಚಣ ತಾಲೂಕುಗಳು ಸೇರಿದಂತೆ ಜಿಲ್ಲೆಯ ಬಹುತೇಕ ಭಾಗದಲ್ಲಿ ಭೂಮಿ ನಡುಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಿಕ್ಟರ್ ಮಾಪಕದಲ್ಲಿ 4.9 ರಷ್ಟು ಕಂಪನದ ತೀವ್ರತೆ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ಮೂವತ್ತು ವರ್ಷದ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಸದ್ದು ಆಗಿರಲಿಲ್ಲ ಎಂದು ಹೇಳಲಾಗುತ್ತಿದೆ.
ಜನವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಭೂಕಂಪನವಾಗಿತ್ತು. ಕಳೆದ 15 ದಿನದ ಹಿಂದೆ ಅನೇಕ ಪ್ರದೇಶಗಳಲ್ಲಿ ಭೂಮಿ ಕಂಪಿಸಿತ್ತು. ಪದೇ ಪದೇ ಭೂಕಂಪದಿಂದ ವಿಜಯಪುರ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಅಧಿಕಾರಿಗಳು ಅಧ್ಯಯನ ನಡೆಸಿ ಸಮಸ್ಯೆಗೆ ಪರಿಹಾರ ನೀಡಬೇಕಿದೆ.