ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿಯಾಗಲಿರುವ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ. ವಿವಿಧ ರಾಜ್ಯಗಳಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಜೂನ್
ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ, ಆಂಧ್ರ ಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಧ್ಯ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳು, ಜಾರ್ಖಂಡ್ನಲ್ಲಿ ಎರಡು ಸ್ಥಾನಗಳು ಖಾಲಿಯಾಗುತ್ತಿವೆ. ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಕರ್ನಾಟಕದಲ್ಲಿ ನಡೆಯಲಿರುವ ನಾಲ್ಕು ಸ್ಥಾನಗಳ ಚುನಾವಣೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೇಡಿಎಸ್ ನಡುವಿನ ರಾಜಕೀಯ ಸಮೀಕರಣಗಳ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುತೂಹಲ ಕೆರಳಿಸಿದೆ. ಜೂನ್
ಇದನ್ನೂ ಓದಿ :NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ | ವಶದಲ್ಲಿದ್ದ ಪೋಷಕ ಬಂಧನ, ಇನ್ನಷ್ಟು ಮಂದಿ ತನಿಖೆ ವ್ಯಾಪ್ತಿಗೆ
ಚುನಾವಣಾ ವೇಳಾಪಟ್ಟಿಯಂತೆ ಮೇ 29ರಂದು ಅಧಿಸೂಚನೆ ಹೊರಬೀಳಲಿದೆ. ಜೂನ್ 5ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಜೂನ್ 8 ಕೊನೆಯ ದಿನವಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 11ರವರೆಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಜೂನ್ 18ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಸಂಬಂಧಿತ ರಾಜ್ಯ ವಿಧಾನಸಭೆಗಳ ಆಯ್ಕೆಯಾದ ಸದಸ್ಯರು ಮತ ಚಲಾಯಿಸುತ್ತಾರೆ. ಅನುಪಾತಾತ್ಮಕ ಪ್ರತಿನಿಧಿತ್ವ ಹಾಗೂ ಏಕ ವರ್ಗಾಯಿಸಬಹುದಾದ ಮತ (Single Transferable Vote) ಪದ್ಧತಿಯಡಿ ಚುನಾವಣೆ ನಡೆಯುತ್ತದೆ. ಬಹುಮತ ಹೊಂದಿರುವ ಪಕ್ಷಗಳಿಗೆ ಹೆಚ್ಚುವರಿ ಸ್ಥಾನಗಳ ಲಾಭ ದೊರೆಯುವ ಸಾಧ್ಯತೆ ಇರುವುದರಿಂದ ಹಲವು ರಾಜ್ಯಗಳಲ್ಲಿ ರಾಜಕೀಯ ಲೆಕ್ಕಾಚಾರಗಳು ಈಗಾಗಲೇ ಆರಂಭವಾಗಿವೆ. ಜೂನ್
ಇದರ ಜೊತೆಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನ ತಲಾ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯನ್ನೂ ಆಯೋಗ ಘೋಷಿಸಿದೆ. ಸದಸ್ಯರ ರಾಜೀನಾಮೆ ಹಾಗೂ ನಿಧನದಿಂದ ಖಾಲಿಯಾಗಿರುವ ಸ್ಥಾನಗಳಿಗೆ ಈ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜೂನ್
ಇದನ್ನೂ ನೋಡಿ : “(ಲೇಬರ್ ಕೋಡ್ಸ್) ಶ್ರಮ ಸಂಹಿತೆಗಳ ಜಾರಿ: ರಾಜ್ಯಗಳ ಮುಂದಿನ ದಾರಿ ಯಾವುದು?” Janashakthi Media
