ಅಸ್ಸಾಂ ಮುಖ್ಯಮಂತ್ರಿಯಿಂದ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗದಿಂದ ಎಚ್ಚರಿಕೆ

ನವದೆಹಲಿ: ಅಸ್ಸಾಂ ರಾಜ್ಯದ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ನಾಯಕ ಮತ್ತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅವರಿಗೆ ಎಚ್ಚರಿಕೆ ನೀಡಿದೆ.

ಅಕ್ಟೋಬರ್ 30 ರಂದು ಮತದಾನ ನಡೆಯಲಿರುವ ವಿಧಾನಸಭಾ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಅಸ್ಸಾಂ ಮುಖ್ಯಮಂತ್ರಿ ಮತ್ತು ಹಿಮಂತ ಬಿಸ್ವಾ ಶರ್ಮಾ ಅವರಿಗೆ ಚುನಾವಣಾ ಆಯೋಗ ಕೇವಲ ಎಚ್ಚರಿಕೆ ನೀಡಿ ಅಂತ್ಯಗೊಳಿಸಿದೆ.

ಬಿಜೆಪಿಯ ಸ್ಟಾರ್ ಪ್ರಚಾರಕ ಶರ್ಮಾ ನೀತಿ ಸಂಹಿತೆಗೆ ಸಂಬಂಧಿಸಿದ ಸಲಹೆ/ಸೂಚನೆಗಳಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ಎಂದು ಚುನಾವಣಾ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.

‘ಇನ್ನು ಮುಂದೆ ಪ್ರಚಾರದ ವೇಳೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಎಚ್ಚರಿಸಲಾಗಿದ್ದು, ಜಾಗರೂಕರಾಗಿ ಮತ್ತು ಸಂಯಮದಿಂದ ವರ್ತಿಸಬೇಕು‘ ಎಂದು ಆದೇಶದಲ್ಲಿ ತಿಳಿಸಿದೆ.

ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ರಸ್ತೆಗಳು ಮತ್ತು ಇತರೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಭರವಸೆ ನೀಡಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಚುನಾವಣಾ ಆಯೋಗ ಸೋಮವಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು.

Donate Janashakthi Media

Leave a Reply

Your email address will not be published. Required fields are marked *