ನವದೆಹಲಿ : ಬಹುಕೋಟಿ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಭಾರತದ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಅವರಿಂದ ವಶಪಡಿಸಿಕೊಳ್ಳಲಾಗಿರುವ 18,170 ಕೋಟಿ ರೂ. ಮೌಲ್ಯದ ಆಸ್ತಿ ಮತ್ತು ಹಣದಲ್ಲಿ 9,371.17 ಕೋಟಿ ರೂ. ಹಣವನ್ನು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ವರ್ಗಾಯಿಸಲಾಗಿದೆ. ಈ ಉದ್ಯಮಿಗಳಿಂದ ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದ್ದ ಬ್ಯಾಂಕ್ಗಳಿಗೆ ಜಾರಿ ನಿರ್ದೇಶನಾಲಯ (ಇಡಿ) ಹಣವನ್ನು ವರ್ಗಾಯಿಸಿದೆ.
ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಬ್ಯಾಂಕ್ ಗಳಿಗೆ ವಂಚಿಸಿ ದೇಶಾಂತರ ತೆರಳಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.
ED not only attached/ seized assets worth of Rs. 18,170.02 crore (80.45% of total loss to banks) in case of Vijay Mallya, Nirav Modi and Mehul Choksi under the PMLA but also transferred a part of attached/ seized assets of Rs. 9371.17 Crore to the PSBs and
Central Government.— ED (@dir_ed) June 23, 2021
ಮುಟ್ಟುಗೋಲು ಹಾಕಿಕೊಳ್ಳಲಾದ ಮೊತ್ತವು ಬ್ಯಾಂಕ್ ಗಳಿಗೆ ಆದ ನಷ್ಟದ ಒಟ್ಟು ಮೊತ್ತದ ಶೇ. 80.45 ರಷ್ಟಾಗುತ್ತದೆ. ಪಿಎಂಎಲ್‌ಎ (ಹಣ ಅಕ್ರಮ ವರ್ಗಾವಣೆ ಪ್ರಕರಣ) ಅಡಿ ಈ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಈ ಬಗ್ಗೆ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಮಾಃಇತಿ ನೀಡಿದ ಜಾರಿ ನಿರ್ದೇಶನಾಲಯ, 9,371.17 ಕೋಟಿ ಮೌಲ್ಯದ ಸ್ವತ್ತುಗಳನ್ನು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಹೇಳಿದೆ.
ಇನ್ನು, ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ತಮ್ಮ ಕಂಪನಿಗಳ ಮೂಲಕ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳನ್ನು ವಂಚಿಸಿದ್ದರು.