ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣ: ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಇಂದು ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಚಾರಣೆಯನ್ನು ನಡೆಸಿದೆ.

ನವದೆಹಲಿಯಲ್ಲಿರುವ ಜಾರಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜನ ಖರ್ಗೆ ಅವರಿಗೆ ಸಮನ್ಸ್ ಜಾರಿ ಮಾಡಿದ್ದರು.

ಇದನ್ನು ಓದಿ: ಶ್ರೀಲಂಕಾದ ಇವತ್ತಿನ ಆರ್ಥಿಕ ಬಿಕ್ಕಟ್ಟನ್ನು ಅರ್ಥ ಮಾಡಿಕೊಳ್ಳುವುದು ಹೇಗೆ?

ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಕೆಲವೊಂದು ವಿಷಯಗಳನ್ನು ತಿಳಿಯಲು ಬಯಸಿದ್ದು, ಹಣ ವರ್ಗಾವಣೆ ತಡೆ ಕಾಯ್ಡೆಯಡಿ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿ ತಿಳಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್​ ಸುದ್ದಿ ಪತ್ರಿಕೆಯನ್ನು 1938ರಲ್ಲಿ ಜವಾಹರ್ ಲಾಲ್​ ನೆಹರೂ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಸೇರಿ ಪ್ರಾರಂಭಿಸಿದ್ದರು. ಬಳಿಕ ಇದು ಕಾಂಗ್ರೆಸ್ ಪಕ್ಷದ ಮುಖವಾಣಿಯಾಗಿತ್ತು. ನ್ಯಾಷನಲ್ ಹೆರಾಲ್ಡ್​ ಪತ್ರಿಕೆಯನ್ನು ಅಸೋಸಿಯೇಟೆಡ್​ ಜರ್ನಲ್​ ಲಿಮಿಟೆಡ್ (ಎಜೆಎಲ್)​ ಪ್ರಕಟಿಸುತ್ತಿತ್ತು. ಆದರೆ 2008ರಲ್ಲಿ ಎಜೆಎಲ್​ ಬರೋಬ್ಬರಿ 90 ಕೋಟಿ ರೂಪಾಯಿಗಳಷ್ಟು ಸಾಲದ ಸುಳಿಯಲ್ಲಿ ಸಿಲುಕಿ‌ ಪತ್ರಿಕೆಯ ಪ್ರಕಟಣೆ ಸ್ಥಗಿತಗೊಂಡಿತು.

ಯಂಗ್​ ಇಂಡಿಯಾ ಲಿಮಿಟೆಡ್​, ನ್ಯಾಷನಲ್ ಹೆರಾಲ್ಡ್​ ಪತ್ರಿಕೆಯನ್ನು ಕಾನೂನು ಬದ್ಧವಾಗಿ ಸ್ವಾಧೀನ ಪಡಿಸಿಕೊಂಡಿಲ್ಲ. ನಿಷ್ಕ್ರಿಯಗೊಂಡ ಮುದ್ರಣ ಮಾಧ್ಯಮದ (ಎಜೆಎಲ್​) ಸ್ವತ್ತುಗಳನ್ನು ದುರುದ್ದೇಶಪೂರಿತವಾಗಿ ತೆಗೆದುಕೊಂಡಿದೆ. ಈ ಮೂಲಕ 2000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ ಮತ್ತು ಲಾಭ ಮಾಡಿಕೊಂಡಿದೆ ಆರೋಪಗಳು ಇವೆ.

ಯಂಗ್​ ಇಂಡಿಯಾದ ಅಧ್ಯಕ್ಷರಾಗಿದ್ದ ಆಸ್ಕರ್​ ಫರ್ನಾಂಡಿಸ್​ ಮೃತಪಟ್ಟ ಬಳಿಕ ಮಲ್ಲಿಕಾರ್ಜುನ್ ಖರ್ಗೆ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದರು. ಇದೇ ಹಿನ್ನೆಲೆಯಲ್ಲಿ ಇ.ಡಿ. ಈಗ ಅವರ ವಿಚಾರಣೆಯನ್ನೂ ನಡೆಸುತ್ತಿದೆ.

Donate Janashakthi Media

Leave a Reply

Your email address will not be published. Required fields are marked *