ನಾಗ್ಪುರ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ ದೇಶ್ ಮುಖ್ ಅವರ ನಾಗ್ಪುರ ಮತ್ತು ಮುಂಬಯಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಾಗ್ಪುರದಲ್ಲಿರುವ ದೇಶಮುಖ್ ಅವರ ನಿವಾಸವೂ ಸೇರಿದಂತೆ ಹಲವೆಡೆ ಪರಿಶೀಲನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ: ದೇಶ್‌ಮುಖ್ ವಿರುದ್ಧ ಸಿಬಿಐ ಪ್ರಾಥಮಿಕ ತನಿಖೆ ನಡೆಸಲು ಬಾಂಬೆ ಹೈಕೋರ್ಟ್ ನಿರ್ದೇಶನ
ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಅನಿಲ್ ದೇಶ್‌ಮುಖ್ ಆದೇಶಿಸಿದ್ದರು ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅನಿಲ್ ದೇಶ್ ಮುಖ್ ಮತ್ತು ಇತರರ ವಿರುದ್ಧ ಸಿಬಿಐ ಕಳೆದ ತಿಂಗಳು ಅಕ್ರಮ ಹಣಕಾಸು ವರ್ಗಾವಣೆ ಸಂಬಂಧ ಎಫ್ ಐ ಆರ್ ದಾಖಲಿಸಿತ್ತು.
ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅನಿಲ್ ದೇಶ್ ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಬಾಂಬೆ ಹೈಕೋರ್ಟ್ ಆದೇಶದಂತೆ ಸಿಬಿಐ ಎಫ್ ಐ ಆರ್ ದಾಖಲಿಸಿದೆ.