ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು (ಇಡಿ) ಜೂನ್ 25 ಬುಧವಾರದಂದು ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇತೃತ್ವದ ತಂಡ ನಗರದ ಅಶೋಕ್ ನಗರದಲ್ಲಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಇಡಿ
ಇಲ್ಲಿನ ಅಧಿಕಾರಿಗಳ ಮೇಲೆ ಕರ್ತವ್ಯಲೋಪ, ಭ್ರಷ್ಟಾಚಾರ ಹಾಗೂ ಸ್ವಜನಪಕ್ಷಪಾತದ ಆರೋಪಗಳು ಕೇಳಿ ಬಂದ ಹಿನ್ನೆಲೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.
ಇದನ್ನೂ ಓದಿ: ಪ್ರಲ್ಹಾದ್ ಜೋಶಿ ವಿರುದ್ಧ ಬೆದರಿಕೆ ಆರೋಪ; ಏಮ್ಸ್ ಹೋರಾಟಗಾರರ ವಿರುದ್ಧ ಎಫ್ಐಆರ್
ರಾಜ್ಯದಲ್ಲಿ ದಿನೇ ದಿನೇ ವಾಯುಮಾಲಿನ್ಯ, ಜಲಮಾಲಿನ್ಯದ ಪ್ರಮಾಣ ಏರಿಕೆ ಆಗುತ್ತಿದೆ. ಈ ವಿಚಾರಗಳ ಬಗ್ಗೆ ನೀವು ಜಾಗ್ರತೆಯಿಂದ, ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ ಎಂದು ಮಂಡಳಿಯ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ.
ಮಾಲಿನ್ಯದ ಪ್ರಮಾಣ, ನಿಯಮ ಉಲ್ಲಂಘನೆಯ ಪ್ರಕರಣಗಳು ಏರುತ್ತಿದ್ದರೂ ನೀವು ಏನು ಕ್ರಮ ಕೈಗೊಂಡಿದ್ದೀರಿ..? ಯಾರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ..? ನಿಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸದಿದ್ದರೆ ಅದೂ ಕೂಡ ಅಪರಾಧವೇ ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಎಚ್ಚರಿಕೆ ರವಾನಿಸಿದ್ದಾರೆ.
ಇದನ್ನೂ ನೋಡಿ: ಘೋಷಿತ ತುರ್ತು ಪರಿಸ್ಥಿತಿ ಮತ್ತು ಅಘೋಷಿತ ತುರ್ತು ಪರಿಸ್ಥಿತಿಯ ಸಾಮ್ಯತೆ ಮತ್ತು ವ್ಯತ್ಯಾಸಗಳನ್ನು ತೆರೆದಿಡುವ ಪುಸ್ತಕ
