ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳಲ್ಲಿ ಇಡಿ ದಾಳಿ: ದಾಖಲೆ ಪರಿಶೀಲನೆ

ತುಮಕೂರಿನಲ್ಲಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಪ್ರಸ್ತುತ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಮಾಲಿಕತ್ವದ ಸಿದ್ಧಾರ್ಥ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನು ಓದಿ:ತುಮಕೂರಿನ ಅಭಿವೃದ್ಧಿಗೆ ಮೆಟ್ರೋ ರೈಲು ಬೇಕೆಬೇಕು: ಡಾ. ಜಿ.ಪರಮೇಶ್ವರ

ಇಡಿ ಅಧಿಕಾರಿಗಳು ಸುಮಾರು 9 ವಾಹನಗಳಲ್ಲಿ ಆಗಮಿಸಿ, ಕಾಲೇಜುಗಳ ಆಡಳಿತ ವಿಭಾಗಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ದಾಳಿ, ನಾಲ್ಕು ವರ್ಷಗಳ ಹಿಂದೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯ ನಂತರದ ಮುಂದುವರಿದ ಕ್ರಮವಾಗಿದೆ. ಆ ಸಮಯದಲ್ಲಿ ಕೋಟ್ಯಂತರ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿತ್ತು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ:ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಕೆ ಎನ್‌ ರಾಜಣ್ಣ

ಈ ದಾಳಿಯಿಂದಾಗಿ, ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಆಡಳಿತ ಮತ್ತು ಹಣಕಾಸು ವ್ಯವಹಾರಗಳ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *