ಅಕ್ರಮ ಕಲ್ಲಿದ್ದಲು ಗಣಿಗಾರಿಕೆ: ಪಶ್ಚಿಮ ಬಂಗಾಳದ ಹಲವು ಕಡೆ ಇಡಿ ದಾಳಿ

ಕೋಲ್ಕತ್ತ: ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು, ಪಶ್ಚಿಮ ಬಂಗಾಳ ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ ಕಲ್ಲಿದ್ದಲು ಗಣಿಗಾರಿಕೆ ಹಾಗೂ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 3ರಂದು ದಾಳಿ ಮಾಡಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ ಎಂದು ಇಡಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಚಾರ್ಮಾಡಿ ಘಾಟಿನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು; ಹತ್ತಾರು ಎಕರೆ ಹುಲ್ಲುಗಾವಲು ಬೆಂಕಿಗಾಹುತಿ

ಪಿಎಂಎಲ್‌ಎ ಕಾಯ್ದೆ ಅಡಿಯಲ್ಲಿ ರಾಜ್ಯ ಪೊಲೀಸ್‌ ಅಧಿಕಾರಿ ಮನೋರಂಜನ್ ಮೊಂಡಲ್ ಸೇರಿದಂತೆ ಹಲವು ಅಧಿಕಾರಿಗಳು, ಉದ್ಯಮಿಗಳಿಗೆ ಸೇರಿದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದಾರೆ.

ಕಿರಣ್ ಖಾನ್, ಶೇಖ್ ಅಖ್ತರ್, ಪ್ರಬೀರ್ ದತ್ತ, ಮಿರ್ಜಾ ಬೈಗ್ ಸೇರಿದಂತೆ ಇತರರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ರಾಜಕೀಯ ಸಲಹೆ ಸಂಸ್ಥೆ ಐ–ಪ್ಯಾಕ್ ಕಚೇರಿಗಳ ಮೇಲೆ ಕಳೆದ ತಿಂಗಳು ಇಡಿ ದಾಳಿ ನಡೆದಿತ್ತು.

Donate Janashakthi Media

Leave a Reply

Your email address will not be published. Required fields are marked *