ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಮೇ 22 ಗುರುವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದೆ. ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ದೂರಿನ ಹಿನ್ನೆಲೆ ದಾಳಿ ನಡೆಸಿದ ಲೋಕಾ ಟೀಮ್, ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿಯನ್ನು ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ್ದಾರೆ.
ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರ ಬಂಧಿತರು. ಆರೋಪಿಗಳು, ವರ್ಗಾವಣೆ ಮಾಡಲು ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ: ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 800 ಕ್ಕೂ ಹೆಚ್ಚು ಅಂಕ ಕುಸಿತ : 15 ನಿಮಿಷಗಳಲ್ಲಿ ಹೂಡಿಕೆದಾರರಿಗೆ 2.52 ಲಕ್ಷ ಕೋಟಿ ರೂ.ನಷ್ಟ
ಈ ಬಗ್ಗೆ ಶಕುಂತಲಾ ಕಾಂಬಳೆ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು. ದೂರಿನ ಅನ್ವಯ ಲೋಕಾಯುಕ್ತ ಇನ್ಸ್ಪೆಕ್ಟರ್ ಧರ್ಮಟ್ಟಿ ನೇತೃತ್ವದಲ್ಲಿ ನಡೆದ ದಾಳಿ ವೇಳೆ ಆರೋಪಿಗಳು 15 ಸಾವಿರ ಮುಂಗಡ ಹಣ ತೆಗೆದುಕೊಳ್ಳುವಾಗ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿದ್ದಾರೆ.
ಲೋಕಾಯುಕ್ತ ದಾಳಿ ಮಾಡ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಅಸ್ವಸ್ಥತೆಗೊಂಡಿದ್ದು, ಕೂಡಲೇ ಕಚೇರಿಗೆ ವೈದ್ಯರನ್ನ ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ವಿಚಾರಣೆ ಮುಂದುವರಿದಿದೆ.
ಇದನ್ನೂ ನೋಡಿ: ಬಿಡದಿ : ಮೂಕ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ Janashakthi Media