ಕಲಬುರ್ಗಿ: ಜಿಲ್ಲೆಯ ಆಳಂದ್ ಪಟ್ಟಣದ ಶಿಕ್ಷಣ ಇಲಾಖೆಯ ಪುಸ್ತಕ ಗೋದಾಮಿಗೆ ಬೆಂಕಿ ತಗುಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಪಠ್ಯ ಪುಸಕ್ತಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಶಿಕ್ಷಣ
ಈ ಒಂದು ಅಗ್ನಿ ದುರಂತದಲ್ಲಿ ಅವಘಡದಲ್ಲಿ ಒಂದು ಕೋಣೆಯಲ್ಲಿನ ಸುಮಾರು 2 ಲಕ್ಷಕ್ಕೂ ಅಧಿಕ ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು 1 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ರಾಜ್ಯದ 18 ಜಿಲ್ಲೆಗಳಲ್ಲಿ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆ
ಅಲ್ಲದೆ ಇನ್ನೊಂದು ಕೋಣೆಯಲ್ಲಿ ಪುಸ್ತಕಗಳು ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.
4ರಿಂದ 8ನೇ ತರಗತಿವರೆಗೆ ವಿವಿಧ ಶಾಲೆಗಳಿಗೆ ವಿತರಣೆಗಾಗಿ ದಾಸ್ತಾನು ಮಾಡಿದ್ದ ಪುಸ್ತಕ ಕೋಣೆಗೆ ಬೆಂಕಿ ತಗುಲಿ ಭಾರಿ ನಷ್ಟವಾಗಿದೆ. ಗೋದಾಮಿನಲ್ಲಿ ಇಡಲಾಗಿದ್ದ ಶಾಲೆಗಳಿಗೆ ವಿತರಣೆಯಾಗಬೇಕಿದ್ದ ಪಠ್ಯಪುಸ್ತಕಗಳು, ಕಲಿಕಾ ಸಾಮಗ್ರಿ ಮತ್ತು ಇತರ ಶೈಕ್ಷಣಿಕ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ ಎನ್ನಲಾಗಿದೆ.
ಇದನ್ನೂ ನೋಡಿ: ಬಿಡದಿ : ಮೂಕ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ Janashakthi Media