ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ನಿರಂತರ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿ ಸಂಘಟನೆ ಎಸ್‌ಎಫ್‌ಐ (Students Federation of India) ಜೂನ್ 20ರಂದು ಶಿಕ್ಷಣ ಸಚಿವಾಲಯದತ್ತ ಭಾರೀ ಪ್ರತಿಭಟನೆ ನಡೆಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಗ್ರಹಿಸಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಧರ್ಮೇಂದ್ರ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಗಳು, ಪ್ರವೇಶ ಪ್ರಕ್ರಿಯೆಯ ಅಕ್ರಮಗಳು ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಉಲ್ಲೇಖಿಸಿ, ದೇಶದ ಶಿಕ್ಷಣ ವ್ಯವಸ್ಥೆ “ವ್ಯವಸ್ಥಿತ ಕುಸಿತ”ದ ಹಂತದಲ್ಲಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಧರ್ಮೇಂದ್ರ
ಬೆಳಗ್ಗೆಯೇ ಪ್ರತಿಭಟನೆ ಆರಂಭವಾದ ನಂತರ ದೆಹಲಿ ಪೊಲೀಸರು ಗಲಭೆ ನಿಯಂತ್ರಣ ಉಪಕರಣಗಳೊಂದಿಗೆ ಭಾರೀ ಭದ್ರತೆಯನ್ನು ನಿಯೋಜಿಸಿದ್ದರು. ವಿದ್ಯಾರ್ಥಿಗಳ ವಸತಿ ಪ್ರದೇಶಗಳು ಹಾಗೂ ಪ್ರತಿಭಟನಾ ಸ್ಥಳದ ಬಳಿ ಭದ್ರತೆ ಹೆಚ್ಚಿಸಲಾಗಿತ್ತು.
ಇದನ್ನೂ ಓದಿ: ಬೆಂಗಳೂರು| ಸಿಐಡಿ ಇನ್ಸ್‌ಪೆಕ್ಟರ್ ತಂಡದಿಂದ 20 ಲಕ್ಷ ದರೋಡೆ: ಇಬ್ಬರ ಬಂಧನ
ಎಸ್‌ಎಫ್‌ಐ ಹೇಳಿಕೆಯ ಪ್ರಕಾರ, ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವು ಕಾರ್ಯಕರ್ತರನ್ನು ಪೊಲೀಸರು ತಾತ್ಕಾಲಿಕವಾಗಿ ಬಂಧಿಸಿದರೂ, ನಂತರ ಉಳಿದ ಪ್ರತಿಭಟನಾಕಾರರ ಒತ್ತಡ ಹಾಗೂ ಧರಣಿಯ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.
ನಂತರ ಅಧಿಕಾರಿಗಳು ಎಸ್‌ಎಫ್‌ಐನ ಐದು ಸದಸ್ಯರ ಪ್ರತಿನಿಧಿ ತಂಡಕ್ಕೆ ಸಚಿವಾಲಯದ ಅಧಿಕಾರಿಗಳನ್ನು ಭೇಟಿಯಾಗಲು ಅವಕಾಶ ನೀಡಿದರು. ಈ ನಿಯೋಗದಲ್ಲಿ ಎಸ್‌ಎಫ್‌ಐ ಅಖಿಲ ಭಾರತ ಅಧ್ಯಕ್ಷ ಆದರ್ಶ್ ಎಂ. ಸಜಿ, ಪ್ರಧಾನ ಕಾರ್ಯದರ್ಶಿ ಶ್ರೀಜನ್ ಭಟ್ಟಾಚಾರ್ಯ, ಜಂಟಿ ಕಾರ್ಯದರ್ಶಿ ಐಶೆ ಘೋಷ್ ಮತ್ತು ಉಪಾಧ್ಯಕ್ಷೆ ಶಿಲ್ಪಾ ಸೇರಿದ್ದರು.

ಸಭೆಯ ಬಳಿಕ ಮಾತನಾಡಿದ ಸೃಜನ್ ಭಟ್ಟಾಚಾರ್ಯ, “ಪುನರಾವರ್ತಿತ ಪ್ರಶ್ನೆಪತ್ರಿಕೆ ಸೋರಿಕೆಗಳು ಮತ್ತು ಆಡಳಿತಾತ್ಮಕ ನಿರ್ಧಾರಗಳು ದೇಶದ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಸಂಪೂರ್ಣವಾಗಿ ಹಾಳುಮಾಡಿವೆ” ಎಂದು ಹೇಳಿದರು. ವಿದ್ಯಾರ್ಥಿಗಳು ಸಂಸ್ಥಾತ್ಮಕ ಅಸಮರ್ಥತೆಯ ಭಾರವನ್ನು ಹೊರುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಎಸ್‌ಎಫ್‌ಐ ಸರ್ಕಾರವು ತಕ್ಷಣ ಹೊಣೆಗಾರಿಕೆ ಕ್ರಮಗಳನ್ನು ಕೈಗೊಳ್ಳದಿದ್ದರೆ ರಾಜ್ಯಮಟ್ಟದಲ್ಲಿ ಇನ್ನಷ್ಟು ದೊಡ್ಡ ಪ್ರತಿಭಟನೆಗಳನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಇಂದು ನಡೆದ ಪ್ರತಿಭಟನೆ ಹಾಗೂ ನೀಡಲಾದ ಮನವಿಗೆ ಸಂಬಂಧಿಸಿ ಸಚಿವಾಲಯದ ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.
ಇದನ್ನೂ ನೋಡಿ: ಪಿಚ್ಚರ್ ಪಯಣ -174| ಸಿನಿಮಾ – ವಲವಾರ, ಗ್ರಾಮೀಣ ಬದುಕಿನ ಸೊಗಡು | ವಿಶ್ಲೇಷಣೆ – ಎಂ.ನಾಗರಾಜ ಶೆಟ್ಟಿ
