ಬೆಂಗಳೂರು | ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು -ಶಿಕ್ಷಕರ ಸಭೆ ನಡೆಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಪ್ರತಿ ಎರಡು ತಿಂಗಳಿಗೊಮ್ಮೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪೋಷಕರು ಶಿಕ್ಷಕರ ಮಹಾಸಭೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜನವರಿ 3 ಮತ್ತು ಫೆಬ್ರವರಿ 28ರಂದು ಪೇರೆಂಟ್ ಟೀಚರ್ ಮೀಟಿಂಗ್ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಇದನ್ನೂ ಓದಿ : ಕಾರವಾರ | ಶಿಕ್ಷಕರ ಪ್ರೀತಿ ವಿಶ್ವಾಸ ನೆನಪಿಟ್ಟುಕೊಂಡು ತಪ್ಪು ಮಾಡದಂತೆ ಎಚ್ಚರಿಕೆ ವಹಿಸಿದ್ದೇನೆ – ಬಸವರಾಜ ಹೊರಟ್ಟಿ

ರಾಜ್ಯಾದ್ಯಂತ ಪಾಲಕರು ಮತ್ತು ಶಿಕ್ಷಕರ ಸಭೆ ಕಳೆದ ನವೆಂಬರ್ 14ರಂದು ನಡೆಸಲಾಗಿತ್ತು. ಇದೇ ರೀತಿ ಮುಂದೆ ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಲು ಸೂಚಿಸಲಾಗಿತ್ತು. ಅಂತೆಯೇ ಸಭೆಯ ದಿನಾಂಕ ನಿಗದಿ ಮಾಡಿ ಸುತ್ತೋಲೆ ಹೊರಡಿಸಲಾಗಿದೆ.

ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಶಾಲೆಗಳಲ್ಲಿ ಮಹಾಸಭೆ ನಡೆಸಿದ ಮಾಹಿತಿ, ಹಾಜರಾದ ವಿದ್ಯಾರ್ಥಿಗಳು, ಆಹ್ವಾನಿಸಿದ ಪೋಷಕರು ಹಾಗೂ ಹಾಜರಾದ ಪೋಷಕರ ಸಂಖ್ಯೆಯ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ನವೆಂಬರ್ 14ರ ಸಭೆಗೆ ನೀಡಲಾದ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

ಇದನ್ನೂ ನೋಡಿ : ಬಿಕ್ಲು ಶಿವ ಕೊಲೆ ಪ್ರಕರಣ | ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *