ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಸ್ಪೋಟ; ಎಂಟು ಮಂದಿ ಮರಣ

  • ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸ್ಫೋಟ
  • ಅಗ್ನಿ ಅವಘಡದ ಕುರಿತು ತನಿಖೆ

ನವದೆಹಲಿ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯ ಬಾಯ್ಲರ್‌ನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ 8 ಮಂದಿ ಮೃತಪಟ್ಟಿದ್ದಾರೆ ಎಂದು ಹಾಪುರ್ ಐಜಿ ಪ್ರವೀಣ್ ಕುಮಾರ್ ಹೇಳಿದ್ದಾರೆ. ಜತೆಗೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದ ಸ್ಫೋಟದಿಂದಾಗಿ , ಅಗ್ನಿಯ ಜ್ವಾಲೆ ಇಡೀ ಕಾರ್ಖಾನೆಗೆ ವ್ಯಾಪಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಂಭವಿಸಿರುವ ಅಗ್ನಿ ಅವಘಡದ ಕುರಿತು ತನಿಖೆ ನಡೆಸಲಾಗುವುದು ಹಾಗೂ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ ಐಜಿ ಪ್ರವೀಣ್ ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ʻʻಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದು ತಕ್ಷಣ ಸ್ಥಳಕ್ಕೆ ಭೇಟಿ ಕೊಡುವಂತೆ ತಿಳಿಸಲಾಗಿದೆ. ಸಂತ್ರಸ್ತರಿಗೆ ಬೇಕಾದ ಎಲ್ಲ ರೀತಿಯ ನೆರವನ್ನು ತಕ್ಷಣ ನೀಡಬೇಕಾಗಿ ಸೂಚಿಸಲಾಗಿದೆ”

ಉತ್ತರ ಪ್ರದೇಶ ಸಚಿವ ನಂದ್‌ ಗೋಪಾಲ್‌ ಗುಪ್ತಾ ನಂದಿ ಪ್ರತಿಕ್ರಿಯೆ ನೀಡಿದ್ದು, ಆರು ಜನ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದರು. ಆದರೆ, ಸಮಯ ಕಳೆದಂತೆ ಸಾವಿನ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ.  “ದೇವರು ಮೃತಪಟ್ಟ ಜೀವಗಳಿಗೆ ಶಾಂತಿ ದೊರಕಿಸಿಕೊಡಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಸ್ಥರಿಗೆ ಸಾವಿನ ಭಾರವನ್ನು ಬರಿಸುವ ಶಕ್ತಿ ಸಿಗಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ,” ಎಂದು ಟ್ವೀಟ್‌ ಮಾಡಿದ್ದಾರೆ.

ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಸ್ಪೋಟ ಸಂಭವಿಸಿದ ಬೆನ್ನಲ್ಲಿಯೇ ಅಗ್ನಿಶಾಮಕ ದಳದ ವಾಹನಗಳು ತುರ್ತಾಗಿ ಸ್ಥಳಕ್ಕೆ ಬಂದಿದ್ದವು. ಈ ವರೆಗೂ 8 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ದೇಹಗಳು ಘಟನಾ ಸ್ಥಣದಲ್ಲಿಯೇ ಸಿಕ್ಕಿವೆ. ಸಂಪೂರ್ಣವಾಗಿ ಸುಟ್ಟುಹೋದ ರೀತಿಯಲ್ಲಿ ದೇಹಗಳು ಸಿಕ್ಕಿವೆ. ಸುಟ್ಟ ಗಾಯ ಹಾಗೂ ಉಸಿರಾಡಲು ಉಂಟಾದ ಸಮಸ್ಯೆಯಿಂದಾಗಿ ಸಾವಿಗೀಡಾಗಿರುವ ಶಂಕೆ ಮಾಡಲಾಗಿದೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿವೆ. ಇಡೀ ಆಕಾಶಕ್ಕೆ ಬೆಂಕಿ ಹೊತ್ತಿದೆಯೇಯೋ ಎನ್ನುವ ರೀತಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *