ಮಹಾರಾಷ್ಟ್ರ: ಇಂದು ಸಂಜೆ ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಇಂದು ಶಿವಸೇನೆ ನಾಯಕ ಉದಯ್ ಸಾಮಂತ್ ಖಚಿತಪಡಿಸಿದ್ದಾರೆ.
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಶಿವಸೇನೆ ನಾಯಕ ಹೇಳಿದ್ದಾರೆ. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮುನ್ನ ಈ ಬೆಳವಣಿಗೆ ನಡೆದಿದೆ.
ಸಂಜೆ 5.30ಕ್ಕೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಬಿಜೆಪಿಯ ಉನ್ನತ ನಾಯಕರು ಮತ್ತು ಕೇಸರಿ ಪಕ್ಷ ಆಡಳಿತವಿರುವ ರಾಜ್ಯಗಳ ಸಿಎಂಗಳ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ.
ಇದನ್ನೂ ನೋಡಿ: ಚಲನಚಿತ್ರ ವಾಣಿಜ್ಯ ಮಂಡಳಿ |ಲೈಂಗಿಕ ದೌರ್ಜನ್ಯ ತಡೆ? ಸಮಿತಿ ರಚಿಸಿ ತಡೆ ಹಿಡಿದದ್ದು ಯಾಕೆ? – ಕವಿತಾ ಲಂಕೇಶ್