ಶಿವಮೊಗ್ಗ: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಕರಾವಳಿ, ಮಲೆನಾಡು ಭಾಗದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರವಾಗಿ ಸುರುದ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಮಂಡಗಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ ನಡೆದಿದೆ.
ಮನೆ ಗೋಡೆ ಕುಸಿದ ಪರಿಣಾಮ ಸಿದ್ದಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೇಮಾವತಿ ಎಂಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: 2028ಕ್ಕೆ ದಲಿತ ಸಿಎಂ ಬಗ್ಗೆ ಗಂಭೀರ ಚರ್ಚೆ: ಸತೀಶ್ ಜಾರಕಿಹೊಳಿ
ಇನ್ನು ಪರಶುರಾಮ್, ಪಲ್ಲವಿ, ಚೇತನ್ ಎಂಬುವವರು ಸಣ್ಣ-ಪುಟ್ಟ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ನೋಡಿ: POSH ಕಾಯ್ದೆ ಎಂದರೇನು ಮತ್ತು ಅದು ಹೇಗೆ ಕೆಲಸ ಮಾಡುತ್ತದೆ?Janashakthi Media