ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂನ್.3 ರಂದು ಮತದಾನ, ಜೂನ್.6 ರಂದು ಫಲಿತಾಂಶ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು ಜೂನ್ 3 ರಂದು ಮತದಾನ ನಡೆಯಲಿದೆ. ಫಲಿತಾಂಶ

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆದು ಜೂನ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 3 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.

ಇದನ್ನು ಓದಿ : ಆಶ್ರಮದಲ್ಲಿ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ

ಮೇ 9 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು , ಮೇ 16ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ನಾಮಪತ್ರ ವಾಪಸ್ ಪಡೆಯಲು ಮೇ 20 ಕಡೆಯ ದಿನಾಂಕವಾಗಿದೆ.

ಇದನ್ನು ನೋಡಿ : ರಾಯಚೂರು ಲೋಕಸಭೆ : ಬಿಜೆಪಿಯೊಳಗೆ ಬಂಡಾಯ, ಕಾಂಗ್ರೆಸ್‌ನೊಳಗೆ ಬೇಗುದಿ Janashakthi Media

Donate Janashakthi Media

Leave a Reply

Your email address will not be published. Required fields are marked *