ಚುನಾವಣಾ ಬಾಂಡ್ ಕೇಸ್ : ನಳಿನ್ ಕುಮಾರ್ ಕಟೀಲ್‌ಗೆ ಬಿಗ್‌ ರಿಲೀಫ್ ನೀಡಿದ ಸುಪ್ರೀಂ

Please follow and like us:

ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ ಅವರಿಗೆ ಸುಪ್ರೀಂಕೋರ್ಟ್ ಬಿಗ್‌ ರಿಲೀಫ್‌ ನೀಡಿದೆ.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ಸುಲಿಗೆ ಆರೋಪ ಪ್ರಕರಣದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಅಸ್ಪಷ್ಟ ದೂರು ಎಂದು ಹೇಳಿ ಮೇಲ್ಮನವಿಯನ್ನು ವಜಾಗೊಳಿಸಿದೆ. ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ, ಜನಾಧಿಕಾರ ಸಂಘರ್ಷ ಪರಿಷತ್ತಿನ ಆದರ್ಶ ಅಯ್ಯರ್ ಸಲ್ಲಿಸಿದ್ದ ಮೇಲ್ಮನವಿಯನ್ನು  ವಿಚಾರಣೆ ಮಾಡಿದ್ದು, ಸಂಪೂರ್ಣ ಊಹೆಯ ದೂರು ಇದಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದ್ದಾರೆ.

ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಇದೀಗ ನಳೀನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೇರಿದಂತೆ ಇನ್ನಿತರರಿಗೂ ಬಿಗ್​ ರಿಲೀಫ್ ನೀಡಲಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *