ಚುನಾವಣಾ ಆಯೋಗ – ಮೋದಿ ಸರ್ಕಾರ 12 ರಾಜ್ಯಗಳಲ್ಲಿ ʻವೋಟ್ ಚೋರಿʼ ಸಂಚು: ಕಾಂಗ್ರೆಸ್ ಆರೋಪ

ಚೆನ್ನೈ: ಚುನಾವಣಾ ಆಯೋಗವು ಮೋದಿ ಸರ್ಕಾರದೊಂದಿಗೆ ಶಾಮೀಲಾಗಿ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಅಡಿಯಲ್ಲಿ ದೇಶದ 12 ರಾಜ್ಯಗಳಲ್ಲಿ ʻವೋಟ್ ಚೋರಿʼ ನಡೆಸಲು ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

ಕೇಂದ್ರ ಚುನಾವಣಾ ಆಯೋಗ ತಮಿಳುನಾಡಿನಲ್ಲಿ ತೀವ್ರ ಪರಿಷ್ಕರಣೆಗೆ ಮುಂದಾಗಿದೆ. ಇದರಲ್ಲಿ ಏನೋ ಪಿತೂರಿ ಇದೆ ಎಂದು ತಮಿಳುನಾಡಿನ ಸಿಎಂ ಸ್ಟಾಲಿನ್‌ ಆರೋಪಿಸಿದ್ದಾರೆ. ಜೊತೆಗೆ ನವೆಂಬರ್‌2 ರಂದು ಸಭೆ ನಡೆಸಲಿದ್ದು, ಎಲ್ಲ ರಾಜಕೀಯ ನಾಯಕರು ಈ ಸಭೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ವೋಟ್ಚೋರಿ

“ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ತೀವ್ರ ಪರಿಷ್ಕರಣಾ ಅಭಿಯಾನದಲ್ಲಿ 69 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. 12 ರಾಜ್ಯಗಳಲ್ಲಿ ಕೋಟ್ಯಂತರ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತದೆ. ಆ ಮೂಲಕ ಚುನಾವಣಾ ಆಯೋಗ ‘ವೋಟ್ ಚೋರಿ’ ಆಟವಾಡಲು ಶುರು ಮಾಡಿಕೊಂಡಿದೆ. ಇದು ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗ ಜಂಟಿಯಾಗಿ ನಡೆಸುತ್ತಿರುವ ಬಹಿರಂಗ ಮತ ಕಳ್ಳತನ” ಎಂದು ಆರೋಪಿಸಿ ಎಕ್ಸ್‌ನಲ್ಲಿ ಕಾಂಗ್ರೆಸ್‌ ಪೋಸ್ಟ್‌ ಹಂಚಿಕೊಂಡಿದೆ.

ಎಸ್ಐಆರ್ಗೆ ಆತುರ ಏಕೆ?

ಕೇಂದ್ರ ಬಿಜೆಪಿ ಸರ್ಕಾರ ಸ್ವತಂತ್ರ್ಯ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು, ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ಉಲ್ಲಂಘಿಸಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ತೊಡಗಿದೆ. ಪ್ರಜಾಪ್ರಭುತ್ವದ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಇದನ್ನೂ ಓದಿ: 10 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ SIR: ಚುನಾವಣಾ ಆಯೋಗ

ಸುಪ್ರೀಂ ಕೋರ್ಟ್‌ ಆದೇಶದ ಮೇಲೆಯೂ ದೇಶಾದ್ಯಂತ ಎಸ್‌ಐಆರ್ ಜಾರಿಗೆ ತರಲು ಚುನಾವಣಾ ಆಯೋಗಕ್ಕೆ ಇಷ್ಟೊಂದು ಆತುರ ಏಕೆ?. ಬಿಹಾರದಲ್ಲಿ ರಾಜಕೀಯವಾಗಿ ಬಳಸಿಕೊಂಡ ಅಕ್ರಮ ವಲಸಿಗರ ಬಗ್ಗೆ ಚುನಾವಣಾ ಆಯೋಗ ಯಾವುದೇ ವಿವರಗಳನ್ನು ಏಕೆ ಹಂಚಿಕೊಂಡಿಲ್ಲ? ಅಸ್ಸಾಂನಲ್ಲಿ ಎಸ್‌ಐಆರ್ ಏಕೆ ಇಲ್ಲ? ಇದು ಮೋದಿ ಮತ್ತು ಶಾ ಅವರ ಸಂಪೂರ್ಣ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮೋದಿ ಸರ್ಕಾರದ ಆಡಳಿತದ ಬಗ್ಗೆ ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರಮೋದ್ ತಿವಾರಿ ಟೀಕೆ ಮಾಡಿದ್ದಾರೆ.

ಬಿಹಾರದಲ್ಲಿ ನಡೆದ ಎಸ್‌ಐಆರ್ ಈಗಾಗಲೇ ಚುನಾವಣಾ ಆಯೋಗದ ನಿಷ್ಪಕ್ಷಪಾತದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ತಿರುಚಿದ ಬಗ್ಗೆ ರಾಹುಲ್ ಗಾಂಧಿ ಈ ಹಿಂದೆ ಮಾಡಿದ ಆರೋಪವನ್ನು ಉಲ್ಲೇಖಿಸಿದ ಅವರು, “ಎಸ್‌ಐಟಿ ತನಿಖೆಯಲ್ಲಿ ‘ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಕೇಂದ್ರೀಕೃತ ಕಾರ್ಯಾಚರಣೆ’ ನಡೆದಿರುವುದಕ್ಕೆ ಪುರಾವೆ ಸಿಕ್ಕಿದೆ. ಇಂತಹ ಪರಿಸ್ಥಿತಿಯಲ್ಲಿ, ಎಸ್‌ಐಆರ್ ವಿಸ್ತರಿಸುವ ನಿರ್ಧಾರವು ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದರು.

. 2 ರಂದು ಸರ್ವಪಕ್ಷಗಳ ಸಭೆ

ʻಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಮತ್ತು ಮಳೆಗಾಲದ ನವೆಂಬರ್-ಡಿಸೆಂಬರ್ ತಿಂಗಳುಗಳಲ್ಲಿ ಇದನ್ನು ನಡೆಸುವುದು ಪ್ರಾಯೋಗಿಕವಾಗಿ ಕಷ್ಟ. ಬಿಹಾರದಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಎಸ್‌ಸಿ/ಎಸ್‌ಟಿ ಸಮುದಾಯದವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ನವೆಂಬರ್ 2 ರಂದು ಸರ್ವಪಕ್ಷಗಳ ಸಭೆ ಕರೆಯುವುದಾಗಿ ಅವರು ಘೋಷಿಸಿದ್ದಾರೆ.

ಇದನ್ನೂ ನೋಡಿ: ನಿರಂಜನ ಶತಮಾನೋತ್ಸವ ಸಮಾರೋಪ | ಕನ್ನಡ ಸಾಹಿತ್ಯಕ್ಕೆ ಕ್ಲಾಸಿಕ್ ಕೃತಿಗಳನ್ನು ನೀಡಿದ ನಿರಂಜನJanashakthi Media

Donate Janashakthi Media

Leave a Reply

Your email address will not be published. Required fields are marked *