- ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಮೂರು ಪಕ್ಷಗಳು
- ವಿಜಯೇಂದ್ರಗೆ ಕೈತಪ್ಪಿದ ಪರಿಷತ್ ಸ್ಥಾನ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ. ಚುನಾವಣೆ ನಡೆಯುವ 7 ಸ್ಥಾನಗಳಿಗೆ ಬಿಜೆಪಿ ,ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನುಇಂದು ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ. ಕೆ. ಅಬ್ದುಲ್ ಜಬ್ಬಾರ್ ಮತ್ತು ಎಂ. ನಾಗರಾಜ್ ಯಾದವ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ.
ಈ ಹಿಂದೆ ಬಿಎಸ್ ಯಡಿಯೂರಪ್ಪ ತಮ್ಮ ಮಗ ಬಿ.ವೈ ವಿಜಯೇಂದ್ರಗೆ ಟಿಕೆಟ್ ನೀಡುವಂತೆ ಕೇಳಿಕೊಂಡಿದ್ದರು ಆದರೆ ಹಿರಿಯರ ಮಾತಿಗೆ ಕಿವಿಗೊಡದ ಬಿಜೆಪಿ ಹೈಕಮಾಂಡ್, ನಾಲ್ವರ ಹೆಸರನ್ನು ಅಂತಿಮಗೊಳಿಸಿದೆ. ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಕೇಶವಪ್ರಸಾದ್, ಲಕ್ಷ್ಮಣ ಸವದಿಗೆ ಟಿಕೆಟ್ ನೀಡಿದ್ದಾರೆ. ಪಶ್ಚಿಮ ಕ್ಷೇತ್ರದಿಂದಜೆಡಿಎಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಪಕ್ಷಾಂತರ ಮಾಡಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಹೈ ಕಮಾಂಡ್ ಅಂತಿಮಗೊಳಿಸಿದೆ. ಜೆಡಿಎಸ್‌ನಿಂದ ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಕಣಕ್ಕೆ ಇಳಿಯಲಿದ್ದಾರೆ.