ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದೆ. ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ್ದು ಹಲವಾರು ಚುನಾವಣಾ ಅಕ್ರಮಗಳ ವಿರುದ್ಧ ಅಧಿಕಾರಿ ಗಳು ಕಣ್ಣಿಟ್ಟು ಕಾರ್ಯಪ್ರವೃತ್ತರಾಗಿದ್ದಾರೆ.
ಇದನ್ನೂ ಓದಿ : ಚುನಾವಣಾ ಅಕ್ರಮ: ₹ 47.43 ಕೋಟಿ ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳ ವಶ
ಈ ಸಂಬಂಧ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಳೆದ ಬಾರಿ ₹ 47.43 ಕೋಟಿ ಮೌಲ್ಯದ ನಗದು, ಮದ್ಯ, ಮತದಾರರಿಗೆ ಆಮಿಷ ಒಡ್ಡಲು ಬಳಸುವ ವಸ್ತುಗಳು, ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೀಗ ಒಟ್ಟಾರೆ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ 174 ಕೋಟಿ ರೂ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಚುನಾವಣಾ ಅಕ್ರಮದ ಆರೋಪದಡಿ ಕಳೆದ ಬಾರಿ ಒಟ್ಟು 316 ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 1,416 ಪ್ರಕರಣ ದಾಖಲಿಸಿ, 1,869 ಜನರಿಂದ ಬಾಂಡ್ ಭದ್ರತೆ ಪಡೆಯಲಾಗಿತ್ತು.