ಭಾರೀ ನಿರೀಕ್ಷೆ ಮೂಡಿಸಿರುವ ಪಂಚರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆಯಾಗಿದ್ದು, ಸಮಾಜವಾದಿ ಪಕ್ಷ ಪ್ರಬಲ ಪೈಪೋಟಿ ನೀಡುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ 155 ಕ್ಷೇತ್ರಗಳಲ್ಲಿ, ಸಮಾಜವಾದಿ ಪಕ್ಷ 97 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.
ಉತ್ತರಾಖಂಡ್ನಲ್ಲಿ ಬಿಜೆಪಿಗೆ ಮುನ್ನಡೆಯಾಗಿದ್ದು, 2 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಂಡಿದೆ.
ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ AAPಗೆ ಮುನ್ನಡೆಯಾಗಿದೆ. 3 ಕ್ಷೇತ್ರಗಳಲ್ಲಿ AAPಗೆ ಮುನ್ನಡೆ ಸಾಧಿಸಿದ್ದು, 1 ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಮುನ್ನಡೆಯಾಗಿದೆ.
ಗೋವಾದಲ್ಲಿ ಬಿಜೆಪಿ, ಕಾಂಗ್ರೆಸ್ ಸಮಬಲದ ಪೈಪೋಟಿ ನೀಡುತ್ತಿದ್ದು,ಬಿಜೆಪಿ 18 ರಲ್ಲಿ, ಕಾಂಗ್ರೆಸ್ 16 ರಲ್ಲಿ ಮುನ್ನಡೆ ಸಾಧಿಸಿದೆ.
ಮಣಿಪುರದಲ್ಲಿ ಕಾಂಗ್ರೆಸ್ ಬಿಜೆಪಿ ಸಮಬಲದ ಪೈಪೋಟಿ ನಡೆಸಿದ್ದು, ಬಿಜೆಪಿ 17 ರಲ್ಲಿ, ಕಾಂಗ್ರೆಸ್ 14 ರಲ್ಲಿ ಮುನ್ನಡೆ ಸಾಧಿಸಿದೆ.
ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾಗಳಲ್ಲಿ ಯಾವ ಪಕ್ಷ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಸಹಜವಾಗಿಯೇ ದೇಶಾದ್ಯಂತ ಮೂಡಿದೆ. ಈ ಬಾರಿ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಉತ್ತರ ಪ್ರದೇಶ ಮತ್ತು ಮಣಿಪುರಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದ್ದು, ಉತ್ತರಾಖಂಡ್ನಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ ಇದೆ. ಪಂಜಾಬ್ನಲ್ಲಿ ಅರವಿಂದ್ ಕ್ರೇಜಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಆಡಳಿತಕ್ಕೆ ಬರಲಿದೆ ಎಂದು ಹೇಳಲಾಗಿದೆ. ಅದೇನೇ ಇದ್ದರೂ ಮತ ಎಣಿಕೆ ಮುಗಿದ ಬಳಿಕವೇ ಯಾವ ರಾಜ್ಯದಲ್ಲಿ, ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬ ವಿಚಾರ ಸ್ಪಷ್ಟವಾಗುವುದು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯನ್ನು
http://www.janashakthimedia.com ನಲ್ಲಿ ವೀಕ್ಷಿಸಬಹುದಾಗಿದೆ.