ಮತ ಎಣಿಕೆ: ಗುಜರಾತ್‌ನಲ್ಲಿ ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮುನ್ನಡೆ! ಹಿಮಾಚಲದಲ್ಲಿ ಸಮಬಲದ ಪೈಪೋಟಿ

ಗುಜರಾತ್‌ನ 33 ಜಿಲ್ಲೆಗಳ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಗುಜರಾತ್‌ನ ಅಸೆಂಬ್ಲಿ ಎಲೆಕ್ಷನ್ನಲ್ಲಿ ಈ ವರ್ಷ ಶೇ.66.31ರಷ್ಟು ಮತದಾನವಾಗಿದೆ.  ಇಂದು ಬಹು ನಿರೀಕ್ಷಿತ ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ 16, ಎಎಪಿ 07 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕೆಲ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌, ಎಎಪಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಒಂದು ಸುತ್ತಿನಲ್ಲಿ ಬಿಜೆಪಿ, ಮತ್ತೊಂದು ಸುತ್ತಿನಲ್ಲಿ ಕಾಂಗ್ರೆಸ್‌, ಮಗದೊಂದು ಸುತ್ತಿನಲ್ಲಿ ಎಎಪಿ ಮುನ್ನಡೆ ಕಾಯ್ದೆಕೊಳ್ಳುತ್ತಿದೆ. ಇದು ಆರಂಭಿಕ ಮುನ್ನಡಯಷ್ಟೆ, ಅಂಕಿ- ಸಂಖ್ಯೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ,  ಪೂರ್ಣ ಫಲಿತಾಂಶದವರೆಗೂ ಪ್ರತಿಕ್ರಿಯಿಸುವುದಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ. ತ್ರಿಕೋನ ಸ್ಪರ್ಧೆಯಿಂದ ಕಾಂಗ್ರೆಸ್‌ನ ಮತಗಳು ಎಎಪಿ ಪಾಲಾಗುತ್ತಿದ್ದು, ಇದರಿಂದ ಬಿಜೆಪಿಗೆ ಹೆಚ್ಚಿನ ಲಾಭ ಸಿಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

182 ವಿಧಾನಸಭೆ ಕ್ಷೇತ್ರಗಳಲ್ಲಿ ಯಾವುದೇ ಪಕ್ಷ ಸರ್ಕಾರ ರಚಿಸಲು ಕನಿಷ್ಠ 92 ಸೀಟುಗಳ ಮ್ಯಾಜಿಕ್ ಸಂಖ್ಯೆಯನ್ನು ದಾಟಬೇಕಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 99 ಸೀಟುಗಳಲ್ಲಿ ಜಯಗಳಿಸಿತ್ತು. ಆದರೆ ಈ ಬಾರಿ ಬಿಜೆಪಿ 120ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ನಿರಾಯಾಸವಾಗಿ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಎಕ್ಸಿಟ್ ಪೋಲ್ ಸಮೀಕ್ಷೆಗಳು ತಿಳಿಸಿವೆ.

1985ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 149 ಸೀಟುಗಳಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದಿತ್ತು. ಪ್ರಸ್ತುತ ಬಿಜೆಪಿ 154 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ನ ದಾಖಲೆ ಮುರಿದರೂ ಅಚ್ಚರಿಪಡಬೇಕಿಲ್ಲ ಎಂದು ವಿಶ್ಲೇಶಿಸಲಾಗುತ್ತಿದೆ.

ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಹಿಮಾಚಲ ಪ್ರದೇಶದ 68 ಮತ ಎಣಿಕೆ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 68 ಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸ್ಪರ್ಧಿಸಿದ್ದರೆ. ಆಮ್ ಆದ್ಮಿ ಪಕ್ಷ 67 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಸಿಪಿಐಎಂ 11 ಸ್ಥಾನಗಳಲ್ಲಿ ಸ್ಪರ್ದಿಸಿದೆ.   ಈಗಿನ ಟ್ರೆಂಡ್‌ ಪ್ರಕಾರ ಕಾಂಗ್ರೆಸ್‌ 35, ಬಿಜೆಪಿ 30, ಇತರರು ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಥಿಯೋಗ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಸಿಪಿಐಎಂ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಆರನೇ ಸುತ್ತಿನ ಮತ ಏಣಿಕೆ ಪೂರ್ಣಗೊಂಡಿದ್ದು ಕಾಂಗ್ರೆಸ್‌ ನ ಕುಲದೀಪ್ ಸಿಂಗ್ ರಾಥೋಡ್ – 8503 ಮತ, ಸಿಪಿಐಎಂನ ರಾಕೇಶ್‌ ಸಿಂಗ್‌ – 6238 ಮತ,  ಬಿಜೆಪಿಯ ಅಜಯ್ ಶ್ಯಾಮ್ 5595 ಮತ, ಸ್ವತಂತ್ರ ಅಭ್ಯರ್ಥಿ, ವಿಜಯ್‌ ಪಾಲ್‌ ಕಾಚಿ 4149 ಮತ, ಎಎಪಿ 231 ಮತ ಪಡೆದಿದೆ. ಒಟ್ಟು 14 ಸುತ್ತಿನ ಮತ ಎಣಿಕೆ ನಡೆಯಲಿದ್ದು ಸಿಪಿಐಎಂ ಗೆಲ್ಲುವ ಸಾಧ್ಯತೆ ಇದೆ.

ಹಿಮಾಚಲ ಪ್ರದೇಶದಲ್ಲಿ ಫಲಿತಾಂಶದ ವಿವರ ಕುತೂಹಲ ಕೆರಳಿಸುತ್ತಿದ್ದು, ಸದ್ಯದ ಪ್ರಕಾರ ಬೆಳಗ್ಗೆ 11: 45 ಗಂಟೆ ಸುಮಾರಿಗೆ ಕಾಂಗ್ರೆಸ್ 36 ಮತ್ತು ಬಿಜೆಪಿ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗೆ ಬಿಜೆಪಿ, ಕಾಂಗ್ರೆಸ್‌ ನಡುವೆ ಹಾವು ಏಣಿಯ ಆಟ ನಡೆಯುತ್ತಲೇ ಇದೆ.

Donate Janashakthi Media

Leave a Reply

Your email address will not be published. Required fields are marked *