ಹುಬ್ಬಳ್ಳಿ| ಜೂನ್ 30ರಂದು 24ನೇ ಅವಧಿಯ ಮಹಾಪೌರ ಸ್ಥಾನಗಳಿಗೆ ಚುನಾವಣೆ

Please follow and like us:
ಹುಬ್ಬಳ್ಳಿ: ಜೂನ್ 30 ಸೋಮವಾರದಂದು ಬೆಳಗ್ಗೆ 9 ಗಂಟೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್. ಬಿ. ಶೆಟ್ಟೆಣ್ಣವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹುಬ್ಬಳ್ಳಿ

ಪ್ರಾದೇಶಿಕ ಆಯುಕ್ತ ಎಸ್‌ಬಿ ಶೆಟ್ಟೆಣ್ಣವರ್ ಅವರು ಜೂನ್ 30 ರಂದು ಕಾರ್ಪೊರೇಷನ್‌ನ ಸಭೆಯ ಸಭಾಂಗಣದಲ್ಲಿ ಎಚ್‌ಡಿಎಂಸಿಯ 24 ನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸುವ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಆ ದಿನ, ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 11.00 ರವರೆಗೆ, ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ.

ಇದನ್ನೂ ಓದಿ: ಪೊಲೀಸರು ಕಾಲ್ನಡಿಗೆಯಲ್ಲಿ ಗಸ್ತು ಕರ್ತವ್ಯ ನಿರ್ವಹಿಸಬೇಕು: ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌

ಅದರ ನಂತರ, ನಾಮಪತ್ರಗಳ ಪರಿಶೀಲನೆ, ಮಾನ್ಯ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವುದು, ಅಭ್ಯರ್ಥಿಗಳ ಅಂತಿಮ ಪಟ್ಟಿಯ ಪ್ರಕಟಣೆ, ಅವಿರೋಧ ಚುನಾವಣೆಯ ಸಂದರ್ಭದಲ್ಲಿ ಫಲಿತಾಂಶಗಳ ಘೋಷಣೆ, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಕೈ ಎತ್ತುವ ಮೂಲಕ ಮತದಾನ, ಮತಗಳ ಎಣಿಕೆ ಮತ್ತು ಫಲಿತಾಂಶಗಳ ಘೋಷಣೆಯ ಪ್ರಕ್ರಿಯೆಗಳು ನಡೆಯುತ್ತವೆ.

ಈ‌ ಬಾರಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು ಇರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಪಾಲಿಕೆಯಲ್ಲಿ 15 ಜನ ಬಿಜೆಪಿ ಮಹಿಳಾ ಸದಸ್ಯರಿದ್ದಾರೆ. ಇವರಲ್ಲಿ ಪ್ರೀತಿ‌ ಖೋಡೆ, ಪೂಜಾ ಶೆಜವಾಡಕರ್, ರಾಧಾಬಾಯಿ ಸಫಾರಿ,‌ ಮೀನಾಕ್ಷಿ ವಂಟಮೂರಿ ಸೇರಿದಂತೆ ಹಲವರು ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಧಿಸೂಚನೆ ಪ್ರಕಾರ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ‌ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬ ಗೆ ಮೀಸಲಿದೆ. ಹೀಗಾಗಿ ಮತ್ತೊಮ್ಮೆ ಮಹಿಳಾ ಸಾರಥ್ಯ ಸಿಗಲಿದೆ. 82 ಸದಸ್ಯ ಬಲವಿರುವ ಪಾಲಿಕೆಯಲ್ಲಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 6 ಪಕ್ಷೇತರರು ಹಾಗೂ ಓರ್ವ ಜೆಡಿಎಸ್ ಸದಸ್ಯರಿದ್ದಾರೆ. ಪಕ್ಷೇತರರಲ್ಲಿ ಮೂವರು ಬಿಜೆಪಿ ಸೇರಿದ್ದಾರೆ. ಬಹುತೇಕ ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವ ಸಾದ್ಯತೆಯಿದೆ.

ಇದನ್ನೂ ನೋಡಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ | ಹೋರಾಟಗಾರರನ್ನು ಬಂಧಿಸಿದ ರಾಜ್ಯ ಸರ್ಕಾರ

Please follow and like us:
Donate Janashakthi Media

Leave a Reply

Your email address will not be published. Required fields are marked *