ಸುಪ್ರೀಂ ತರಾಟೆ ಬಳಿಕ ಚುನಾವಣಾ ಬಾಂಡ್​ಗಳ ಮಾಹಿತಿಯನ್ನು ಸಲ್ಲಿಸಿದ SBI :ಮಾರ್ಚ್ 15ರಂದು ಬಹಿರಂಗ

ನವದೆಹಲಿ: ಸುಪ್ರೀಂ ಕೋರ್ಟ್​ ಚಾಟಿ ಬಳಿಕ ಎಚ್ಚೆತ್ತುಕೊಂಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇಂದು ಸಂಜೆ ಭಾರತೀಯ ಚುನಾವಣಾ ಆಯೋಗಕ್ಕೆ (ECI) ಎಲ್ಲಾ ಚುನಾವಣಾ ಬಾಂಡ್​ಗಳ ಡೇಟಾವನ್ನು ಸಲ್ಲಿಸಿದೆ. ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಮಾರ್ಚ್ 15 ರಂದು ಸಾರ್ವಜನಿಕರಿಗಾಗಿ ಎಲ್ಲಾ ಡೇಟಾವನ್ನು ಅಪ್‌ಲೋಡ್ ಮಾಡಲಿದೆ.

2019ರ ಏಪ್ರಿಲ್‌ 12ರಿಂದ ಈವರೆಗೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ವಿವರವನ್ನು ಮಾರ್ಚ್‌ 6ರೊಳಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಫೆ.15ರಂದು ಚುನಾವಣಾ ಬಾಂಡ್‌ಗಳನ್ನು ರದ್ದುಪಡಿಸುವ ಆದೇಶದೊಂದಿಗೆ ತಾಕೀತು ಮಾಡಿತ್ತು. ಅದನ್ನು ಜೂ.30ರ ವರೆಗೆ ವಿಸ್ತರಿಸುವಂತೆ ಎಸ್‌ಬಿಐ ಅರ್ಜಿ ಸಲ್ಲಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಗಡುವು ವಿಸ್ತರಿಸಲು ನಿರಾಕರಿಸಿ ತಕ್ಷಣವೇ ವಿವರ ಸಲ್ಲಿಸಲು ಸಿಬಿಐಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಸಿಬಿಐ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿದೆ.

ಮಾರ್ಚ್ 11ರಂದು ಎಸ್‌ಬಿಐ ಸಲ್ಲಿಸಿದ ಗಡುವು ವಿಸ್ತರಣೆ ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಸಾಂವಿಧಾನಿಕ ಪೀಠ, ಮಾ.12ರ ವ್ಯವಹಾರದ ಅವಧಿ ಮುಗಿಯುವುದರೊಳಗೆ ಚುನಾವಣಾ ಆಯೋಗಕ್ಕೆ ಎಸ್‌ಬಿಐ ವಿವರ ಸಲ್ಲಿಸಬೇಕು. ಚುನಾವಣಾ ಆಯೋಗವು ಮಾ.15ರ ಸಂಜೆ 5 ಗಂಟೆಯೊಳಗೆ ಅದನ್ನು ತನ್ನ ಅಧಿಕೃತ ವೆಬ್‌ಸೈಟಿನಲ್ಲಿ ಪ್ರಕಟಿಸಬೇಕು ಎಂದು ಆದೇಶ ನೀಡಿತು.

ಆಸೋಸಿಷಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ (ಎಡಿಆರ್) ಮತ್ತು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಚುನಾವಣಾ ಬಾಂಡ್ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದವು. ಸುಪ್ರೀಂ ಫೆಬ್ರವರಿ 15 ರಂದು ಚುನಾವಣಾ ಬಾಂಡ್ ರದ್ದು ಗೊಳಿಸುತ್ತು.

Donate Janashakthi Media

Leave a Reply

Your email address will not be published. Required fields are marked *