ನವದೆಹಲಿ :ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣಾ ಬಾಂಡ್ ಬಗ್ಗೆ ವಿವರಗಳನ್ನು ಬಹಿರಂಗಪಡಿಸಲು ವಿಳಂಬ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಅನ್ನು ತರಾಟೆಗೆ ತೆಗೆದುಕೊಂಡಿದೆ ಮತ್ತು ನಾಳೆ ಸಂಜೆಯೊಳಗೆ ಚುನಾವಣಾ ಆಯೋಗಕ್ಕೆ ವಿವರಗಳನ್ನು ಪ್ರಕಟಿಸುವಂತೆ ಆದೇಶಿಸಿದೆ.
ಚುನಾವಣಾ ಬಾಂಡ್ಗಳ ಕುರಿತಾದ ಮಾಹಿತಿ ಸಲ್ಲಿಸಲು ಜೂನ್ 30ರ ತನಕ ಸಮಾಯವಕಾಶ ಕೋರಿ ಎಸ್ಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್ ಮಿಶ್ರಾ ಅವರ ಪೀಠ ಮೇಲಿನಂತೆ ಪ್ರಶ್ನಿಸಿದೆ.
ಸುಪ್ರೀಂ ಕೋರ್ಟ್, ಆಸೋಸಿಷಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ (ಎಡಿಆರ್) ಮತ್ತು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಚುನಾವಣಾ ಬಾಂಡ್ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದವು. ಸುಪ್ರೀಂ ಫೆಬ್ರವರಿ 15 ರಂದು ಚುನಾವಣಾ ಬಾಂಡ್ ರದ್ದು ಗೊಳಿಸುತ್ತು. ಅಷ್ಟೆ ಅಲ್ಲದೆ ವಿವರ ನೀಡಲು ವಿಳಂಬ ಮಾಡಿದ್ದ ಎಸ್ಬಿಐ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ವೇಳೆ ಉಲ್ಲೇಖಿಸಿದೆ. ಚುನಾವಣಾ ಬಾಂಡ್ ಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು- ವಿವಿಧ ಕಂಪನಿಗಳು ನೀಡಿದ ದೇಣಿಗೆ ಮತ್ತು ಯಾವ ಪಕ್ಷಕ್ಕೆ ನೀಡಲಾಯಿತು ಎಂಬ ವಿವರಗಳನ್ನು ನಾಳೆ ಸಂಜೆಯೊಳಗೆ ಚುನಾವಣಾ ಆಯೋಗಕ್ಕೆ ನೀಡಬೇಕೆಂದು ನಿರ್ದೇಶನ ನೀಡಿದೆ.
ಜೂನ್ 30ರವರೆಗೆ ಸಮಯ ಕೇಳಿದ SBI ಅರ್ಜಿಯನ್ನು ವಜಾ ಗೊಳಿಸಿದ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗವು ಈ ವಿವರಗಳನ್ನು ಮಾರ್ಚ್ 15ರ ಸಂಜೆಯವರೆಗೆ ತನ್ನ ವೆಬ್ಸೈಟ್ ನಲ್ಲಿ ಪ್ರಕಟಿಸಬೇಕೆಂದು ನಿರ್ದೇಶನ ನೀಡಿದೆ. ಈ ಮೂಲಕ ಪ್ರಧಾನಿ ಮೋದಿ ಮತ್ತು ಅರ್ ಎಸ್ ಎಸ್ ಎಸ್ ತಂತ್ರಗಳನ್ನು ವಿಫಲಗೊಳಿಸಿದೆ ಮತ್ತು ಮೋದಿ ಕಪಾಳಕ್ಕೆ ಬಾರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪ್ರಕರಣದ ಹಿನ್ನೆಲೆ : ಫೆಬ್ರವರಿ 15ರಂದು ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿತ್ತಲ್ಲದೆ ಎಪ್ರಿಲ್ 12, 2019ರಿಂದ ಚುನಾವಣಾ ಬಾಂಡ್ಗಳ ಮೂಲಕ ದೇಣಿಗೆ ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಮಾರ್ಚ್ 6ರೊಳಗೆ ಸಲ್ಲಿಸುವಂತೆ ಎಸ್ಬಿಐಗೆ ಸೂಚಿಸಿತ್ತು.
ಆದರೆ ಈ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ನೀಡಲು ವಿಫಲವಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ವಾರ ಸುಪ್ರಿಂ ಕೋರ್ಟ್ ಕದ ತಟ್ಟಿ ಜೂನ್ 30ರವರೆಗೆ ಕಾಲಾವಕಾಶ ಕೋರಿತ್ತು.