ಎಲ್ಗರ್ ಪರಿಷತ್ ಪ್ರಕರಣ | ಹೋರಾಟಗಾರ ಗೌತಮ್ ನವಲಖಾಗೆ ಬಾಂಬೆ ಹೈಕೋರ್ಟ್ ಜಾಮೀನು

ಮುಂಬೈ: 2018 ರ ಭೀಮಾ ಕೋರೆಗಾಂವ್-ಎಲ್ಗರ್ ಪರಿಷತ್ ಪ್ರಕರಣದ ಆರೋಪಿ, ಮಾನವ ಹಕ್ಕುಗಳ ಹೋರಾಟಗಾರ ಗೌತಮ್ ನವಲಖ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಎಸ್ ಜಿ ಡಿಗೆ ಅವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ. ಅದಾಗ್ಯೂ, ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಆದೇಶವನ್ನು ಮೂರು ವಾರಗಳ ಕಾಲ ಹೈಕೋರ್ಟ್ ತಡೆಹಿಡಿದಿದೆ.

ಪತ್ರಕರ್ತರೂ ಆಗಿರುವ ಗೌತಮ್ ನವಲಖಾ ಅವರು ಈಗಾಗಲೆ ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ಗೃಹಬಂಧನದಲ್ಲಿ ವಾಸಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಆರು ವಾರಗಳ ಕಾಲ ಆದೇಶವನ್ನು ಅಮಾನತುಗೊಳಿಸುವಂತೆ ಎನ್‌ಐಎ ನ್ಯಾಯಾಲಯವನ್ನು ಕೇಳಿತ್ತು. ಆದರೆ ಇದಕ್ಕೆ ಒಪ್ಪದ ಕೋರ್ಟ್ ಸಂಸ್ಥೆಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ಇದನ್ನೂ ಓದಿ: ತುಳುನಾಡಿನ ದುಸ್ಥಿತಿಗೆ 3 ದಶಕಗಳ ಬಿಜೆಪಿಯ ದುರಾಡಳಿತವೇ ಕಾರಣ: ಜಿಲ್ಲಾಧಿಕಾರಿ ಕಚೇರಿ ಚಲೋದಲ್ಲಿ ಸಿಪಿಐ(ಎಂ) ಆರೋಪ

ಪ್ರಕರಣಕ್ಕೆ ಸಂಬಂಧಿಸಿದಂತೆ ನವಲಖಾ ಅವರು ಆಗಸ್ಟ್ 2018 ರಿಂದ ಬಂಧಿತರಾಗಿದ್ದಾರೆ. ನವೆಂಬರ್ 2022 ರಲ್ಲಿ, ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಅವರನ್ನು ಗೃಹಬಂಧನಕ್ಕೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿತು. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

ನವಲಖಾ ಅವರ ಜೊತೆಗೆ, ಸುಧಾ ಭಾರದ್ವಾಜ್, ವರವರ ರಾವ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಅವರು ಇದೇ ಪ್ರಕರಣದಲ್ಲಿ ಈ ಹಿಂದೆ ಜಾಮೀನು ಪಡೆದಿದ್ದಾರೆ. ಆದಾಗ್ಯೂ, ಜಾಮೀನಿನ ಮೇಲಿನ ತಡೆಯಾಜ್ಞೆಯ ವಿಸ್ತರಣೆಯಿಂದಾಗಿ ವರವರ ರಾವ್ ಅವರು ಇನ್ನೂ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದಾರೆ.

ಗೌತಮ್ ನವಲಖಾ ಅವರು ಎಲ್ಗರ್ ಪರಿಷತ್ ಪ್ರಕರಣದಲ್ಲಿ ಜಾಮೀನು ಪಡೆದ ಏಳನೇ ಆರೋಪಿಯಾಗಿದ್ದಾರೆ. ನವ್ಲಾಖಾ ಅವರಿಗೆ ನಿಷೇಧಿತ ಸಿಪಿಐ (ಮಾವೋವಾದಿ) ನೊಂದಿಗೆ ಸಂಪರ್ಕವಿದೆ ಎಂದು ವಿಶೇಷ ನ್ಯಾಯಾಲಯವು ಏಪ್ರಿಲ್‌ನಲ್ಲಿ ಅವರಿಗೆ ಜಾಮೀನು ನಿರಾಕರಿಸಿತ್ತು. ತನಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ವಿಶೇಷ ನ್ಯಾಯಾಲಯವು ತಪ್ಪೆಸೆಗಿದೆ ಎಂದು ನವಲಖಾ ಅವರು ಹೈಕೋರ್ಟ್‌ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ ತಿಳಿಸಿದ್ದರು. ನಿಯಮಿತ ಜಾಮೀನು ಕೋರಿ ನವಲಖಾ ಅವರು ಹೈಕೋರ್ಟ್‌ನಲ್ಲಿ ಎರಡನೇ ಸುತ್ತಿನ ಮೇಲ್ಮನವಿ ಸಲ್ಲಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯವು ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಡಿಯೊ ನೋಡಿ: ಸಮುದಾಯ ರಾಜ್ಯ ಸಮ್ಮೇಳನ : ರಂಗಗೀತೆಗಳು : ಜರ್ನಿ ಥಿಯೇಟರ್ ತಂಡದಿಂದ Janashakthi Media

Donate Janashakthi Media

Leave a Reply

Your email address will not be published. Required fields are marked *