ಅಕ್ರಮ ಹಣ ವರ್ಗಾವಣೆ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಮನೆ ಮೇಲೆ ಇಡಿ ದಾಳಿ…!

  • ಮೇ 30ರಂದೇ ಬಂಧನಕ್ಕೆ ಒಳಗಾಗಿದ್ದ ಸತ್ಯೇಂದ್ರ ಜೈನ್‌
  • ಹೆಚ್ಚಿನ ತನಿಖೆಗಾಗಿ ಜಾರಿ ನಿರ್ದೇಶನಾಲಯ ಶೋಧ
  • ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಂಧನ ರಾಜಕೀಯ ಪ್ರೇರಿತ-ಕೇಜ್ರಿವಾಲ್ 

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ : ಲಂಚದ ಬೇಡಿಕೆ ಇಟ್ಟ ಆರೋಪ: ಆರೋಗ್ಯ ಸಚಿವರನ್ನು ವಜಾ ಮಾಡಿದ ಪಂಜಾಬ್ ಮುಖ್ಯಮಂತ್ರಿ

ಮೇ 30 ರಂದು ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಿದ ಇಡಿ ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ 5 ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.

4 ವರ್ಷಗಳ ಹಿಂದೆ 2018ರಲ್ಲಿ ಇಡಿ ಸತ್ಯೇಂದ್ರ ಜೈನ್‌ರನ್ನು ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

Donate Janashakthi Media

Leave a Reply

Your email address will not be published. Required fields are marked *