ಬೆಂಗಳೂರು| ಒತ್ತುವರಿಯಾದ ಸರ್ಕಾರಿ ಜಮೀನು ಜಿಲ್ಲಾಧಿಕಾರಿ ವಶಕ್ಕೆ

ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.18.85 ಕೋಟಿ ಅಂದಾಜು ಮೌಲ್ಯದ ಒಟ್ಟು 8 ಎಕರೆ 0.27 ಗುಂಟೆ ಸರ್ಕಾರಿ ಜಮೀನನ್ನು ನಗರದ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ಬೆಂಗಳೂರು

ಮಾರ್ಚ್‌ 29, ಶನಿವಾರದಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಗುಂಡುತೋಪು, ಸ್ಮಶಾನ, ಕುಂಟೆ, ಸರ್ಕಾರಿ ಮುಫತ್ ಕಾವಲ್, ಸರ್ಕಾರಿ ಕಟ್ಟೆ ಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಅಗರ ಗ್ರಾಮದ ಸ.ನಂ 28ರ ಸರ್ಕಾರಿ ಮುಫತ್ ಕಾವಲ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕಣಮಿಣಕೆ ಗ್ರಾಮದ ಸ.ನಂ 84 ರ ಸರ್ಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.12 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.20 ಕೋಟಿಗಳಾಗಿರುತ್ತದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಗುಡ್ ನ್ಯೂಸ್ : ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2 TMC ನೀರು.!

ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿಯ ತಿಗಳಚೌಡೇನಹಳ್ಳಿ ಗ್ರಾಮದ ಸ.ನಂ 81ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.75 ಕೋಟಿಗಳಾಗಿರುತ್ತದೆ.

ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಅರಕೆರೆ ಗ್ರಾಮದ ಸ.ನಂ 127 ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.20 ಕೋಟಿಗಳಾಗಿರುತ್ತದೆ.

ಹೆಸರಘಟ್ಟ ಹೋಬಳಿಯ ಮತ್ಕೂರು ಗ್ರಾಮದ ಸ.ನಂ. 64ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.07 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.85 ಕೋಟಿಗಳಾಗಿರುತ್ತದೆ.

ಜಾಲ ಹೋಬಳಿಯ ಹುತ್ತನಹಳ್ಳಿ ಗ್ರಾಮದ ಸ.ನಂ 73ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆಗಳಾಗಿದ್ದು ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ.

ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಕಡಬಗೆರೆ ಗ್ರಾಮದ ಸ.ನಂ : 63ರ ಸರ್ಕಾರಿ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.16 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ.

ದಾಸನಪುರ ಹೋಬಳಿಯ ಕಡಬಗೆರೆ ಗ್ರಾಮದ ಸ.ನಂ : 95ರ ಸರ್ಕಾರಿ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.40 ಕೋಟಿಗಳಾಗಿರುತ್ತದೆ.

ದಾಸನಪುರ ಹೋಬಳಿಯ ಹುಲ್ಲೇಗೌಡೇನಹಳ್ಳಿ ಗ್ರಾಮದ ಸ.ನಂ : 58ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆಗಳಾಗಿದ್ದು, ಅಂದಾಜು ಮೌಲ್ಯ ರೂ 6.00 ಕೋಟಿಗಳಾಗಿರುತ್ತದೆ.

ಬೆಂಗಳೂರು ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ಸೂಲಿಕುಂಟೆ ಗ್ರಾಮದ ಸ.ನಂ 48ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.15 ಕೋಟಿಗಳಾಗಿರುತ್ತದೆ.

ಬಿದರಹಳ್ಳಿ ಹೋಬಳಿಯ ಆದೂರು ಗ್ರಾಮದ ಸ.ನಂ: 74ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ.

ಬಿದರಹಳ್ಳಿ ಹೋಬಳಿಯ ದೊಡ್ಡಬನಹಳ್ಳಿ ಗ್ರಾಮದ ಸ.ನಂ: 3ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.01 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.0.10 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಗುಂಜೂರು ಗ್ರಾಮದ ಸ.ನಂ: 244ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.20 ಕೋಟಿಗಳಾಗಿರುತ್ತದೆ.

ಇದನ್ನೂ ನೋಡಿ: ಇಂಗ್ಲೀಷ್‌ ಕಲಿಯೋಣ | ಸರ್ವನಾಮಗಳು – Pronouns | ತೇಜಸ್ವಿನಿ Janashakthi Media

Donate Janashakthi Media

Leave a Reply

Your email address will not be published. Required fields are marked *