ಎಸ್‌ಐಟಿ ಕಸ್ಟಡಿ ಅಂತ್ಯ: ನ್ಯಾಯಾಲಯದ ಮುಂದೆ ಮತ್ತೆ ಹಾಜರಾಗಾಲಿರುವ ವಿಕೃತ ಕಾಮಿ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ವಿಕೃತ ಕಾಮಿ . ಲೈಂಗಿಕ ದೌರ್ಜನ್ಯ  ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ ನ್ಯಾಯಾಲಯ ವಿಧಿಸಿದ್ದ ಎಸ್‌ಐಟಿ ಕಸ್ಟಡಿ ಗುರುವಾರ ಅಂತ್ಯವಾಗಿದ್ದು, ಮತ್ತೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುತ್ತಿದೆ.

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ನ್ಯಾಯಾಕಯದ ಅನುಮತಿ ಮೇರೆಗೆ ಎಸ್‌ಐಟಿ ಅಧಿಕಾರಿಗಳು ಬುಧವಾರ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದಿದ್ದರು.

ಇದನ್ನೂ ಓದಿ: ಜನರ ತೀರ್ಪನ್ನು ಗೌರವಿಸಿ, ಜಗದೀಶ್ ಶೆಟ್ಟರ್ ಗೆ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ವೀರ್ಯ ಮತ್ತು ರಕ್ತ ಮಾದರಿ ಸಂಗ್ರಹ ಮತ್ತು ಲೈಂಗಿಕ ಕ್ರಿಯೆ ನಡೆಸಲು ಸಾಮರ್ಥ್ಯ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಈ ಪರೀಕ್ಷೆಯನ್ನು ನಡೆಸಲಾಗಿದೆ. ತಪಾಸಣೆ ಮುಗಿದ ಬಳಿಕ ಸಂಜೆ ಮತ್ತೆ ಸಿಐಡಿ ಕಚೇರಿಗೆ ಕರೆ ತಂದು ಎಸ್‌ಐಟಿ ವಿಚಾರಣೆಗೆ ಒಳಪಡಿಸಿದೆ. ಇನ್ನೊಂದು ವಾರದಲ್ಲಿ ವರದಿ ಎಸ್‌ಐಟಿ ಕೈ ಸೇರಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದಕ್ಕೂ ಮುನ್ನ ಎರಡು ದಿನಗಳ ಹಿಂದೆ ಪುರುಷತ್ವ ಪರೀಕ್ಷೆ ಸಲುವಾಗಿ ಬೌರಿಂಗ್ ಆಸ್ಪತ್ರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ಕರೆದುಕೊಂಡು ಹೋಗಿತ್ತು. ಆಗ ಕೆಲ ವೈದ್ಯಕೀಯ ಪರೀಕ್ಷೆಗಳಿಗೆ ಕಾನೂನು ತೊಡಕಿನ ಬಗ್ಗೆ ವೈದ್ಯರು ತಿಳಿಸಿದ್ದರು. ಇದರಿಂದ ನ್ಯಾಯಾಲಯದ ಅನುಮತಿ ಪಡೆದು ಎಸ್‌ಐಟಿ ನಿನ್ನೆ ಅವರನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ದಿತ್ತು. ನ್ಯಾಯಾಲಯದ ಸಮ್ಮತಿ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತಜ್ಞ ವೈದ್ಯರ ತಂಡವನ್ನು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರು ರಚಿಸಿದ್ದರು.

ಜೂನ್ 6ರವರೆಗೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದ  ಎಸ್‌ಐಟಿ ಅಧಿಕಾರಿಗಳು  ಗುರುವಾರ ಪ್ರಜ್ವಲ್‌ ರೇವಣ್ಣನ ಕಸ್ಟಡಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಕೋರ್ಟ್ ಮುಂದೆ ಮತ್ತೆ ಪ್ರಜ್ವಲ್ ರೇವಣ್ಣನನ್ನು  ಹಾಜರುಪಡಿಸಲಿದ್ದಾರೆ.

ಇದನ್ನೂ ನೋಡಿ: ಪರಿಸರ ಸಂರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ | ವಿಶ್ಲೇಷಣೆ – ಅಖಿಲೇಶ್Janashakthi Media

Donate Janashakthi Media

Leave a Reply

Your email address will not be published. Required fields are marked *