ರಾಮನಗರ : ಸುಳ್ಳು ಆದೇಶ ಪತ್ರ ಸೃಷ್ಟಿಸಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಪಂಚಾಯತ್ FDA ನೌಕರನೊಬ್ಬ ನರೇಗಾ ಎಂಜಿನಿಯರ್ ನೇಮಕ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲಾ ಪಂಚಾಯತ್‌ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಅಭಿಷೇಕ್ ಎನ್ನುವ ಯುವಕ ರಾಮನಗರದ ಜಿ.ಪಂ FDA ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಈ ವೇಳೆ ಮಧು ಎಂಬ ವ್ಯಕ್ತಿಯನ್ನು ಗುತ್ತಿಗೆ ಆಧಾರದಲ್ಲಿ ಎಂಜಿನಿಯರ್ ಕೆಲಸಕ್ಕೆ ನೇಮಕ ಮಾಡುಕೊಳ್ಳುವ ವಿಷಯವಾಗಿ ಜಿ.ಪಂ ಸಿಇಓ ದಿಗ್ವಿಜಯ್ ಬೋಡ್ಕರವರ ನಕಲಿ ಸಹಿ ಮಾಡಿ ನಕಲಿ ಆದೇಶ ಪತ್ರ ನೀಡಿರೋದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಮಕ್ಕಳಿಗೆ ‘ಜೈ ಶ್ರೀರಾಮ್’ ಎಂದು ಜಪಿಸುವಂತೆ ಒತ್ತಾಯ: ನಿರಾಕರಿಸಿದಾಗ ಅವರಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ
ಕಳೆದ ಮೂರು ತಿಂಗಳಿನಿಂದ ಮಧು ನರೇಗಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಈ ಕುರಿತು ಮಧು ನೇಮಕಾತಿ ಮೇಲೆ ಅನುಮಾನ ವ್ಯಕ್ತಪಡಿಸಿ, ಪರಿಶೀಲನೆ ನಡೆಸಿದ ವೇಳೆ ನಕಲಿ ಆದೇಶದ ಮೂಲಕ ನೇಮಕಾತಿ ಮಾಡಿಕೊಂಡಿರೋದು ಬಯಲಾಗಿದೆ.
ಈ ಸಂಬಂಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಡಿಎ ಅಭಿಷೇಕ್ ಹಾಗೂ ಮಧು ಮೇಲೆ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ನೋಡಿ: ಒಂದು ದೇಶ ಒಂದು ಚುನಾವಣೆ : ಸಮಸ್ಯೆ ಸವಾಲುಗಳು – ಬಿ.ಎಲ್ ಶಂಕರ್ Janashakthi Media