2024-25ನೇ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆ ಇಂಗ್ಲೀಷ್‌ ಮಾಧ್ಯಮದ ತರಗತಿಗಳು ಪ್ರಾರಂಭ

ಬೆಂಗಳೂರು: ರಾಜ್ಯಸರ್ಕಾರ 2024-25ನೇ ಸಾಲಿನಿಂದ ರಾಜ್ಯಾದ್ಯಂತ 75ಕ್ಕೂ ಹೆಚ್ಚುಮಕ್ಕಳ ದಾಖಲಾತಿ ಇರುವ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಸೂತ್ರದಡಿ ಕನ್ನಡ ಮಾಧ್ಯಮದ ಜೊತೆ 1ನೇ ತರಗತಿಯಿಂದ ಆಂಗ್ಲಮಾಧ್ಯಮದ ತರಗತಿಗಳನ್ನು ಸಹ ಪ್ರಾರಂಭಿಸಲು ಒಪ್ಪಿಗೆ ನೀಡಿ ಆದೇಶಿಸಿದೆ.

ರಾಜ್ಯಾದ್ಯಂತ 15 ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳು ಕನ್ನಡ ಮಾಧ್ಯಮವನ್ನು ಹಾಲಿ ಬೋಧಿಸುತ್ತಿದ್ದು, 2024-25ರಿಂದ ಈ ಶಾಲೆಗಳಲ್ಲಿ ಕನ್ನಡದ ಜೊತೆ ಆಂಗ್ಲಮಾಧ್ಯಮದ ತರಗತಿಳು ಸಹ ಪ್ರಾರಂಭವಾಗಲಿದೆ.

ಇದನ್ನು ಓದಿ : ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ,ತಪ್ಪಿತಸ್ಥರನ್ನು ಬಿಡುವುದಿಲ್ಲ; ಧರ್ಮೇಂದ್ರ ಪ್ರಧಾನ್

ಇನ್ನು ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ರಾಜ್ಯಾದ್ಯಂತ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ 1ನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ (ದ್ವಿ ಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲು ಒಪ್ಪಿಗೆ ನೀಡಿ ಆದೇಶಿಸಿದೆ.

ಆಯ್ಕೆಯಾಗಿರುವ ಶಾಲೆಗಳ ಪೈಕಿ ಕಲಬುರಗಿ ಪ್ರಾದೇಶಿಕ ವಿಭಾಗದ 872, ಬೆಂಗಳೂರು ವಿಭಾಗದ 297, ಮೈಸೂರು ವಿಭಾಗದ 140 ಮತ್ತು ಧಾರವಾಡ ವಿಭಾಗದ 110 ಶಾಲೆಗಳು ಸೇರಿವೆ.

ಇದನ್ನು ನೋಡಿ : ನೀಟ್ “ಕಾಸಿದ್ದವರ ಮೆಡಿಕಲ್ “ಮೀಸಲಾತಿಯೆ? ನೀಟಾಗದ ಪರೀಕ್ಷೆಯ ಹೊಣೆ ಹೊರುವುದೆ ಕೇಂದ್ರ ಸರ್ಕಾರ? J#neet2024

Donate Janashakthi Media

Leave a Reply

Your email address will not be published. Required fields are marked *