ನವದೆಹಲಿ:, ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ರೋಸ್ ಅವಿನ್ಯೂ ನ್ಯಾಯಾಲಯವು ಸಿಬಿಐ ವಶಕ್ಕೆ ನೀಡಿದ್ದು, ಮಾರ್ಚ್ 6ರವರೆಗೆ ಸಿಬಿಐ ವಿಚಾರಣೆ ನಡೆಸಲು ಅನುಮತಿ ನೀಡಿದೆ.
ಇದನ್ನು ಓದಿ: ಅಬಕಾರಿ ನೀತಿ ಹಗರಣ: ಸಿಬಿಐ ವಿಚಾರಣೆಗೆ ಹಾಜರಾದ ಮನೀಶ್ ಸಿಸೋಡಿಯಾ
ಅಬಕಾರಿ ನೀತಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಕೇಂದ್ರೀತ ತನಿಖಾ ಸಂಸ್ಥೆ(ಸಿಬಿಐ) ಅಧಿಕಾರಿಗಳು ಫೆಬ್ರವರಿ 26ರಂದು ವಶಕ್ಕೆ ಪಡೆದಿದ್ದರು. ವಿಚಾರಣೆ ಸಂಬಂಧ ಅವಧಿ ವಿಸ್ತರಿಸುವಂತೆ ಕೇಂದ್ರೀಯ ತನಿಖಾ ಸಂಸ್ಥೆ ನ್ಯಾಯಾಧೀಶರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಜಾಗೊಂಡಿದೆ.
ಬಂಧನವಾಗಿ ಐದು ದಿನಗಳ ಕಳೆದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ ಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ಹಾಜರುಪಡಿಸಿತು. ನ್ಯಾಯಾಲಯದ ಆವರಣದ ಹೊರಗೆ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ